×
Ad

ಹೆಸ್ಕುತ್ತೂರು: ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Update: 2024-02-29 19:31 IST

ಕುಂದಾಪುರ: ಪ್ರಾಯೋಗಿಕ ಕಲಿಕೆ ವಿಜ್ಞಾನದ ಅವಿಭಾಜ್ಯ ಅಂಗ. ಪ್ರಯೋಗಗಳನ್ನು ಹೆಚ್ಚು ಹೆಚ್ಚು ಮಾಡುವುದರಿಂದ ವಿಜ್ಞಾನದ ಕಲಿಕೆಯನ್ನು ಆಕರ್ಷಣೀಯಗಳಿಸಬಹುದು ಎಂದು ಯಡ್ತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಎಚ್.ಪ್ರಕಾಶ್ ಶೆಟ್ಟಿ ಹೇಳಿದ್ದಾರೆ.

ಹೆಸಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆದ ವಿಜ್ಞಾನ ದಿನವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಮುಖ್ಯೋಪಾಧ್ಯಾಯ ಶೇಖರ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಎಸ್‌ಡಿಎಂಸಿ ಅಧ್ಯಕ್ಷ ಕೃಷ್ಣ ಕೆದ್ಲಾಯ, ಸರಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಅಬ್ದುಲ್ ರವೂಫ್, ಸಹಶಿಕ್ಷಕರಾದ ಉದಯ ಕುಮಾರ್ ಶೆಟ್ಟಿ, ರಾಘವೆಂದ್ರ ದೇವಾಡಿಗ, ದೈಹಿಕ ಶಿಕ್ಷಕ ಜಯಪ್ರಸಾದ ಶೆಟ್ಟಿ, ಸಂಜೀವ್‌ಎಂ., ಜಯರಾಮ ಶೆಟ್ಟಿ, ಜಯಲಕ್ಷ್ಮಿ ಬಿ., ವಿಜಯಾ ಆರ್., ಗೌರವ ಶಿಕ್ಷಕಿ ಮಧುರ ಉಪಸ್ಥಿತರಿದ್ದರು.

ಸಹ ಶಿಕ್ಷಕ ರವೀಂದ್ರ ನಾಯಕ್ ಸ್ವಾಗಿತಿಸಿದರು. ವಿಜಯ ಶೆಟ್ಟಿ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಅಶೋಕ ತೆಕ್ಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಸ್ವಾತಿ ಬಿ. ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News