×
Ad

ಬೈಂದೂರಿನ ಬಿಜೆಪಿ ಮಾಜಿ ಶಾಸಕ ಸುಕುಮಾರ ಶೆಟ್ಟಿ ಇಂದು ಕಾಂಗ್ರೆಸ್ ಸೇರ್ಪಡೆ

Update: 2024-03-12 09:52 IST

ಕುಂದಾಪುರ, ಮಾ.12: ಬೈಂದೂರಿನ ಬಿಜೆಪಿ ಮಾಜಿ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಇಂದು (ಮಾ.12) ಕಾಂಗ್ರೆಸ್ಗೆ ಸೇರ್ಪಡೆಗೊಳ್ಳಲಿದ್ದಾರೆ.

ಈ ಬಗ್ಗೆ ಅವರು ಬೆಂಗಳೂರಿನಲ್ಲಿ ಸೋಮವಾರ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಕಳೆದ ಅವಧಿಯಲ್ಲಿ ಬಿ.ಎಂ.ಸುಕುಮಾರ ಶೆಟ್ಟಿ ಬೈಂದೂರು ಶಾಸಕರಾಗಿದ್ದರು. ಆದರೆ 2023ರ ವಿಧಾನಸಭಾ ಚುಮಾವಣೆಯಲ್ಲಿ ಬಿಜೆಪಿ ಅವರಿಗೆ ಟಿಕೆಟ್ ನೀಡಿರಲಿಲ್ಲ. ಇದಾದ ಬಳಿಕ ಸುಕುಮಾರ ಶೆಟ್ಟಿ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು. ಬಳಿಕ ಅವರು ಕಾಂಗ್ರೆಸ್ ಸೇರ್ಪಡೆಯ ಬಗ್ಗೆ ಮಾತುಗಳು ಕೇಳಿಬಂದಿದ್ದು ಇದಕ್ಕೆ ಪೂರಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹಿತ ಕೆಲವು ಸಚಿವರನ್ನು ಭೇಟಿಯಾಗಿದ್ದರು.

---------------------

ಸೋಮವಾರ ಸುರ್ಜೇವಾಲರ ಭೇಟಿ ಸಂದರ್ಭದಲ್ಲಿ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಮುಖಂಡರಾದ ಆಯನೂರು ಮಂಜುನಾಥ್, ಸುಧೀರ್ ಕುಮಾರ್ ಮುರೊಳ್ಳಿ ಮೊದಲಾದವರಿದ್ದರು.

ಪ್ರಮುಖ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ. ಮಂಗಳವಾರ ಕಾಂಗ್ರೆಸ್ ಸೇರ್ಪಡೆಯಾಗಲಿದ್ದು, ಪಕ್ಷದ ಮುಂದೆ ಯಾವುದೇ ಬೇಡಿಕೆಯಿಟ್ಟಿಲ್ಲ.

ಬಿ.ಎಂ.ಸುಕುಮಾರ ಶೆಟ್ಟಿ, ಬೈಂದೂರು ಮಾಜಿ ಶಾಸಕರು


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News