×
Ad

ಲೋಕಸಭಾ ಚುನಾವಣೆ: ವೆಚ್ಚ ವೀಕ್ಷಕರ ನೇಮಕ

Update: 2024-03-28 20:44 IST

ಉಡುಪಿ: 2024ನೇ ಸಾಲಿನ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ವೆಚ್ಚ ವೀಕ್ಷಕರನ್ನಾಗಿ ಅಲೋಕ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಚುನಾವಣಾ ವೆಚ್ಚ ವೀಕ್ಷಕರ ಕಛೇರಿಯನ್ನು ನಗರದ ಬನ್ನಂಜೆಯ ಪ್ರವಾಸಿ ಮಂದಿರದಲ್ಲಿ ತೆರೆಯಲಾಗಿದ್ದು, ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಚುನಾವಣೆಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ದೂರವಾಣಿ ಸಂಖ್ಯೆ: 0820- 2001204, ಮೊ.ನಂ:9482258424ಗೆ ಪ್ರತಿದಿನ ಕರೆ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಎಂಸಿಎಂಸಿ ಕಚೇರಿಗೆ ಭೇಟಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ವೆಚ್ಚ ವೀಕ್ಷಕರಾಗಿ ನಿಯುಕ್ತಿ ಗೊಂಡಿರುವ ಅಲೋಕ್ ಕುಮಾರ್ ಅವರು ಇಂದು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ದಲ್ಲಿ ತೆರೆಯಲಾಗಿರುವ ಜಿಲ್ಲಾ ಮಟ್ಟದ ಪ್ರಮಾಣೀಕರಣ ಮತ್ತು ಮಾಧ್ಯಮ ಕಣ್ಗಾವಲು ಸಮಿತಿ (ಎಂ.ಸಿ.ಎಂ.ಸಿ) ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್, ಎಂ.ಸಿ.ಎಂ.ಸಿ ಸಮಿತಿಯ ಜಿಲ್ಲಾ ನೋಡೆಲ್ ಅಧಿಕಾರಿ ಹಾಗೂ ವಾರ್ತಾಧಿಕಾರಿ ಮಂಜುನಾಥ್ ಬಿ ಹಾಗೂ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News