×
Ad

ಕುಂದಾಪುರ: ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಸಿಇಒ ಚಾಲನೆ

Update: 2024-03-28 20:46 IST

ಉಡುಪಿ, ಮಾ.28: ಕುಂದಾಪುರ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಕುಂದಾಪುರ ತಾಲೂಕು ಪಂಚಾಯತ್ ಕಚೇರಿ ಮುಂಭಾಗದಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಮತದಾರರ ಜಾಗೃತಿ ಸಂದೇಶ ಹೊಂದಿರುವ ರಾಷ್ಟ್ರಧ್ವಜದ ತ್ರಿವರ್ಣ ಬಣ್ಣಗಳ ಬಲೂನುಗಳನ್ನು ಹಾರಿಸುವ ಮೂಲಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿ ಸಿಇಓ ಬಾಯಲ್, ಜಿಲ್ಲೆಯಲ್ಲಿ ಪ್ರತಿಶತಃ ನೂರರಷ್ಟು ಮತದಾನ ನಮ್ಮ ಗುರಿಯಾಗಿದೆ. ಕಳೆದ ಚುನಾವಣೆಯಲ್ಲಿ ಯಾವ ಮತಗಟ್ಟೆ ವ್ಯಾಪ್ತಿಯಲ್ಲಿ ಕಡಿಮೆ ಮತದಾನವಾಗಿದೆಯೋ ಅಂತಹ ಪ್ರದೇಶದಲ್ಲಿ ಹೆಚ್ಚು ಜಾಗೃತಿ ಮೂಡಿಸುವ ಕೆಲಸವನ್ನು ಅಧಿಕಾರಿಗಳು ಮಾಡುವುದರೊಂದಿಗೆ ಮತದಾನದ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕುಂದಾಪುರ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕೆ.ಜಿ.ಶಶಿಧರ್ ಮಾತನಾಡಿ, ಮತದಾರರಿಗೆ ಮತದಾನದ ಮಹತ್ವ ತಿಳಿಸಬೇಕು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತದಾರರು ಭಾಗವಹಿಸುವಂತೆ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಮತದಾನದ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಲಾಯಿತು ಹಾಗೂ ಕಡ್ಡಾಯ ಮತದಾನದ ಅರಿವು ಮೂಡಿಸುವ ಸಲುವಾಗಿ ಸಹಿ ಸಂಗ್ರಹಣೆ ಅಭಿಯಾನ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಕುಂದಾಪುರ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ರಶ್ಮಿ, ತಹಶೀಲ್ದಾರಾದ ಶೋಭಾಲಕ್ಷ್ಮೀ, ತಾಲೂಕು ಪಂಚಾಯತಿಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ, ತಾಲೂಕು ಮಟ್ಟದ ಇಲಾಖಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News