ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಮೃತ್ಯು

Update: 2024-04-26 15:49 GMT

ಪಡುಬಿದ್ರಿ, ಎ.26: ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಂದಿಕೂರು ಗ್ರಾಮದ ಮುದರಂಗಡಿ ಜಂಕ್ಷನ್ ಬಳಿ ಎ.26ರಂದು ಬೆಳಗ್ಗೆ 11ಗಂಟೆ ಸುಮಾರಿಗೆ ನಡೆದಿದೆ.

ಮೃತರನ್ನು ಮಂಗಳೂರಿನ ಕಾವೂರು ನಿವಾಸಿ ಸುಮಂಗಲ ಎಂ.(51) ಎಂದು ಗುರುತಿಸಲಾಗಿದೆ. ಕಾರು ಚಾಲಕ ಮೃತರ ಪತಿ ಪುರುಷೋತ್ತಮ ಆರ್.ಆಭ್ಯಂಕರ್(61) ಎಂಬವರು ಗಾಯಗೊಂಡಿದ್ದಾರೆ.

ಇವರು ಮಾಳದಲ್ಲಿ ನಡೆಯುವ ಉಪನಯನ ಕಾರ್ಯಕ್ರಮಕ್ಕೆ ಪಡುಬಿದ್ರಿ ಕಡೆಯಿಂದ ಕಾರ್ಕಳ ಕಡೆಗೆ ಕಾರಿನಲ್ಲಿ ಹೋಗುತ್ತಿ ದ್ದರು. ಈ ವೇಳೆ ಕಾರು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಸುಮಂಗಲ ಪಡುಬಿದ್ರಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News