ಪ್ರತ್ಯೇಕ ಪ್ರಕರಣ: ಇಬ್ಬರು ಮಹಿಳೆಯರ ಆತ್ಮಹತ್ಯೆ

Update: 2024-04-26 16:32 GMT

ಕೋಟ, ಎ.26: ಅನಾರೋಗ್ಯದಿಂದ ಬಳಲುತ್ತಿದ್ದ ಗಿಳಿಯಾರು ಗ್ರಾಮದ ಗೌರಿ(55) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಎ.26ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಬ್ರಿ: ವೈಯಕ್ತಿಕ ಕಾರಣದಿಂದ ಮನನೊಂದ ಬೇಳಂಜೆ ಗ್ರಾಮದ ಬೆನ್ನಾರಕಟ್ಟೆ ನಿವಾಸಿ ರೇಖಾ(51) ಎಂಬವರು ಎ.26ರಂದು ಬೆಳಿಗ್ಗೆ ಮನೆ ಸಮೀಪದ ಹಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News