ಎಸ್ಸಿಎಸ್ಟಿಗೆ ಮೀಸಲಿಟ್ಟಿರುವ ಹಣ ಗ್ಯಾರಂಟಿ ಯೋಜನೆಗೆ ಬಳಕೆ: ಶಾಸಕಿ ಭಾಗೀರಥಿ ಮುರುಳ್ಯ ಆರೋಪ

Update: 2024-04-28 13:45 GMT

ಬೈಂದೂರು, ಎ.28: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮನೆ ನಿರ್ಮಾಣ, ಸಮುದಾಯ ಭವನ ನಿರ್ಮಾಣ, ಕಾಲೋನಿಗಳ ರಸ್ತೆ, ಚರಂಡಿ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗೆ ಬಳಸಿ ನಮಗೆ ವಾಪಾಸ್ ನೀಡುವ ಮೂಲಕ ಮೋಸ ಮಾಡುತ್ತಿದ್ದಾರೆ ಎಂದು ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಆರೋಪಿಸಿದ್ದಾರೆ.

ಕಿರಿಮಂಜೇಶ್ವರದಲ್ಲಿ ರವಿವಾರ ನಡೆದ ಬೈಂದೂರು ಮಂಡಲ ಬಿಜೆಪಿ ಎಸ್‌ಸಿ ಮೋರ್ಚಾದ ಸಮಾವೇಶದಲ್ಲಿ ಅವರು ಮಾತನಾಡುತಿದ್ದರು. ಎಸ್‌ಟಿ, ಎಸ್‌ಟಿ ಸಮುದಾಯಕ್ಕೆ ಮೀಸಲಿಟ್ಟಿರುವ 11 ಸಾವಿರ ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಳಲಾಗಿದೆ. ಹೀಗಾಗಿ ಸರಕಾರ ನೀಡಿರುವ ಉಚಿತ ಪಡೆಯಲು ಯಾವುದೇ ಅಂಜಿಕೆ ಬೇಡ. ಮತದಾನ ಮಾತ್ರ ಯೋಚಿಸಿ ದೇಶದ ಅಭಿವೃದ್ಧಿ, ಸಮರ್ಥ ನಾಯಕತ್ವಕ್ಕೆ ನೀಡಬೇಕು ಎಂದರು.

ಎಸ್ಸಿ ಮೋರ್ಚಾದ ರಾಜ್ಯಾಧ್ಯಕ್ಷ, ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಯವರ 10 ವರ್ಷಗಳ ಆಡಳಿತದ ಬಲ, ಸಮರ್ಥ ನಾಯಕತ್ವ, ಅಭಿವೃದ್ಧಿ ಕಾರ್ಯಗಳು ನಮಗೆ ಶ್ರೀರಕ್ಷೆಯಾಗಿರ ಲಿದೆ ಎಂದು ಹೇಳಿದರು.

ಶಾಸಕರಾದ ಗುರುರಾಜ ಗಂಟಿಹೊಳೆ ಮಾತನಾಡಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಎಸ್ಸಿ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಜಿಲ್ಲಾ ಉಪಾಧ್ಯಕ್ಷ ಸದಾನಂದ ಉಪ್ಪಿನಕುದ್ರು, ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News