ಉಡುಪಿ ಜಿಲ್ಲೆಯ ಕೆಲವು ಚೆಕ್‌ಪೋಸ್ಟ್‌ಗಳ ತೆರವು: ಗಡಿಭಾಗದಲ್ಲಿ ಕಟ್ಟೆಚ್ಚರ

Update: 2024-04-28 17:06 GMT

ಸಾಂದರ್ಭಿಕ ಚಿತ್ರ

ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಸಂಬಂಧ ಸ್ಥಾಪಿಸಲಾಗಿರುವ ಚೆಕ್‌ಪೋಸ್ಟ್‌ಗಳ ಪೈಕಿ ಕೆಲವು ಚೆಕ್ ಪೋಸ್ಟ್‌ಗಳನ್ನು ಮೊದಲ ಹಂತದ ಮತದಾನ ಮುಗಿದ ಹಿನ್ನೆಲೆಯಲ್ಲಿ ತೆರವು ಗೊಳಿಸಲಾಗಿದೆ.

ಚುನಾವಣೆ ಸಂದರ್ಭದಲ್ಲಿ ಅಕ್ರಮವಾಗಿ ಹಣ, ಮದ್ಯ ಸಹಿತ ಇತರ ವಸ್ತು ಗಳನ್ನು ಸಾಗಾಟ ಮಾಡದಂತೆ ಕಟ್ಟೆಚ್ಚರ ವಹಿ ಸಲು ಒಟ್ಟು 18 ಚೆಕ್‌ಪೋಸ್ಟ್ ಗಳನ್ನು ಸ್ಥಾಪಿಸಲಾಗಿತ್ತು. ಇದೀಗ ಉಡುಪಿ ಜಿಲ್ಲೆಯ ನಾಲ್ಕು ಕ್ಷೇತ್ರದ ಮತದಾನ ಮುಗಿದ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಭಾಗ ಸಹಿತ ವಿವಿಧೆಡೆ ಅಳವಡಿಸಲಾಗಿದ್ದ ಚೆಕ್‌ಪೋಸ್ಟ್ ಯಥಾಸ್ಥಿತಿ ಮುಂದುವರಿಸಲಾಗಿದೆ.

ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರವು ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಕಾರಣ ಅಲ್ಲಿ ಹಾಕಲಾ ಗಿರುವ ಚೆಕ್‌ಪೋಸ್ಟ್‌ಗಳನ್ನು ಮೇ 8ರವರೆಗೂ ಮುಂದುವರಿಸಲಾಗುತ್ತದೆ. ಕೆಲವು ಭಾಗದಲ್ಲಿ ಈಗಾಗಲೇ ಚೆಕ್‌ಪೋಸ್ಟ್ ತೆರವುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಸ್ತುತ ಶಿರೂರು, ದಳಿ, ಹೊಸಂಗಡಿ, ಸೋಮೇಶ್ವರ ಭಾಗದಲ್ಲಿರುವ ಚೆಕ್‌ಪೋಸ್ಟ್‌ಗಳಲ್ಲಿ ಇನ್ನಷ್ಟು ಕಟ್ಟೆಚ್ಚರ ವಹಿಸಲಾಗಿದೆ. ಮತದಾರರ ಮೇಲೆ ಪ್ರಭಾವ ಬೀರುವ ಅಕ್ರಮ ಚಟುವಟಿಕೆ ನಿಯಂತ್ರಿಸಲು ಹೆಚ್ಚುವರಿ ಎಫ್‌ಎಸ್‌ಟಿ, ಎಸ್‌ಎಸ್‌ಟಿ, ಪೊಲೀಸ್, ಅಬಕಾರಿ ತಂಡಗಳು ಈ ಚೆಕ್ ಪೋಸ್ಟ್ ಕಾರ್ಯನಿರ್ವಹಿಸುತ್ತಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News