ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಬಿಜೆಪಿ ನಾಯಕರು ಮೌನ: ವೆರೋನಿಕಾ ಕರ್ನೆಲಿಯೋ ಟೀಕೆ

Update: 2024-04-29 12:27 GMT

ವೆರೋನಿಕಾ ಕರ್ನೆಲಿಯೋ

ಉಡುಪಿ: ಹಾಸನದ ಅಶ್ಲೀಲ ವೀಡಿಯೋ ಪ್ರಕರಣದ ಕುರಿತು ರಾಜ್ಯದ ಸೋ ಕಾಲ್ಡ್ ಬಿಜೆಪಿ ನಾಯಕರು ಯಾಕೆ ಮೌನ ವಹಿಸಿದ್ದಾರೆ. ಅವರಿಗೆ ಈ ರಾಜ್ಯದ ಮಹಿಳೆಯರ ಮಾನ ಪ್ರಾಣದ ಕುರಿತು ಯಾವುದೇ ರೀತಿಯ ಕಾಳಜಿ ಇಲ್ಲವೇ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಪ್ರಶ್ನಿಸಿದ್ದಾರೆ.

ಸದಾ ಮಹಿಳೆಯರನ್ನು ಮಾತೆ ಎಂದು ಸಂಬೋಧನೆ ಮಾಡುವ ಬಿಜೆಪಿ ಈ ವಿಚಾರದಲ್ಲಿ ಮೌನ ವಹಿಸಿರುವುದು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ. ಕಾಂಗ್ರೆಸ್ ಸರಕಾರ ಮಹಿಳೆಯರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡಿದರೆ ಮಹಿಳೆ ಯರು ಎಲ್ಲೆಲ್ಲೋ ಹೋಗುತ್ತಿದ್ದಾರೆ ಎಂದು ತನ್ನ ನಾಲಗೆಯನ್ನು ಹರಿ ಬಿಟ್ಟ ಬಿಜೆಪಿ ನಾಯಕಿ ಶ್ರುತಿಗೆ ಈ ಪ್ರಕರಣ ಗಮನಕ್ಕೆ ಬಂದಿಲ್ಲವೇ? ಕಾಂಗ್ರೆಸ್ ಸರಕಾರ ಇದ್ದರೆ ಮಹಿಳೆಯರಿಗೆ ರಕ್ಷಣೆ ಇಲ್ಲ ಎಂದು ಬೊಬ್ಬೆ ಹಾಕುವ ಬಿಜೆಪಿಯ ಶೋಭಾ ಕರಂದ್ಲಾಜೆ, ಮಾಳವಿಕ, ಭಾರತಿ ಶೆಟ್ಟಿ ಸಹಿತ ಎಲ್ಲಾ ಮಹಿಳಾ ನಾಯಕಿಯರು ಏನು ನಿದ್ದೇ ಮಾಡುತ್ತಿದ್ದಾ ರೆಯೇ? ಇದರ ಬಗ್ಗೆ ಚಕಾರವೆತ್ತದಿರುವುದು ಬಿಜೆಪಿಗರ ಮಹಿಳಾ ಪರ ಕಾಳಜಿ ಏನು ಎನ್ನುವುದನ್ನು ತೋರಿಸುತ್ತದೆ ಎಂದು ಅವರು ಟೀಕಿಸಿದ್ದಾರೆ.

ಇತ್ತೀಚೆಗೆ ಬಿಜೆಪಿ ಪಕ್ಷ ಜೆ ಡಿಎಸ್ ಪಕ್ಷದೊಂದಿಗೆ ದೋಸ್ತಿ ಮಾಡಿಕೊಂಡಿದ್ದು ಈ ಬಗ್ಗೆ ಸಂಪೂರ್ಣ ಮೌನ ವಹಿಸುವುದರ ಮೂಲಕ ಪ್ರಜ್ವಲ್ ರೇವಣ್ಣ ಅವರನ್ನು ರಕ್ಷಣೆ ಮಾಡುವ ಕೆಲಸದಲ್ಲಿ ತೊಡಗಿದೆ. ಎಲ್ಲೋ ಸಾವು ಸಂಭವಿಸಿದಾಗ ಓಡೋಡಿ ಬರುವ ಶೋಭ ಕರಂದ್ಲಾಜೆ ಅವರಿಗೆ ಒರ್ವ ಹೆಣ್ಣಾಗಿ ಇನ್ನೊಂದು ಹೆಣ್ಣಿನ ಕಣ್ಣೀರು ಕಾಣಿಸದೇ ಇರುವುದು ವಿಪರ್ಯಾಸವೇ ಸರಿ. ರಾಜ್ಯ ಸರಕಾರ ಈಗಾಗಲೇ ತನಿಖೆ ನಡೆಸುವ ಜವಾಬ್ದಾರಿಯನ್ನು ಎಸ್ ಐಟಿ ಗೆ ವಹಿಸಿದ್ದು ಸೂಕ್ತ ರೀತಿಯ ತನಿಖೆ ನಡೆಸಿ ಒಂದು ವೇಳೆ ಪ್ರಜ್ವಲ್ ರೇವಣ್ಣ ಅವರ ಮೇಲಿನ ಆರೋಪ ಸಾಬೀತಾದರೆ ಕಠಿಣ ಶಿಕ್ಷೆಯನ್ನು ನೀಡಬೇಕು ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News