ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2024-04-29 16:13 GMT

ಬ್ರಹ್ಮಾವರ: ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದ ಹಾರಾಡಿ ಗ್ರಾಮದ ಲಕ್ಮಣ(49) ಎಂಬವರು ವೈಯಕ್ತಿಕ ಕಾರಣದಿಂದ ಮಾನಸಿಕವಾಗಿ ನೊಂದು ಎ.27ರಂದು ರಾತ್ರಿ ವೇಳೆ ಮನೆಯ ಎದುರಿನ ಬಾವಿಯ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ರಸ್ತೆ ಅಪಘಾತದಿಂದ ಗಾಯಗೊಂಡು ನಡೆಯಲು ಕಷ್ಟ ಪಡುತ್ತಿದ್ದ ಹಿರ್ಗಾನ ಗ್ರಾಮದ ದರ್ಣಪ್ಪ(61) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಎ.24ರಂದು ಕೀಟನಾಶಕವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ತೀವ್ರವಾಗಿ ಅಸ್ವಸ್ಥ ಗೊಂಡಿದ್ದ ಅವರು ಎ.28ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟರು.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News