ಬಸ್ ಢಿಕ್ಕಿ: ಬೈಕ್ ಸವಾರ ಮೃತ್ಯು

Update: 2024-04-29 16:15 GMT

ಹಿರಿಯಡ್ಕ, ಎ.29: ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಪೆರ್ಡೂರು ಗ್ರಾಮದ ವಡ್ಡಾಮೇಶ್ವರ ಎಂಬಲ್ಲಿ ಎ.29ರಂದು ಬೆಳಗ್ಗೆ 10.15ರ ಸುಮಾರಿಗೆ ನಡೆದಿದೆ.

ಮೃತರನ್ನು ಗೋವಿಂದ ಮೂಲ್ಯ ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಹೆಬ್ರಿ ಕಡೆಗೆ ಹೋಗುತ್ತಿದ್ದ ಬಸ್, ಎದುರಿನಿಂದ ಬರುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಬೈಕ್ ಸವಾರ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತ ಪಟ್ಟರು ಎಂದು ತಿಳಿದುಬಂದಿದೆ.

ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News