ಶ್ವಾನಗಳಿಗೆ ಉಚಿತ ರೇಬೀಸ್ ರೋಗ ಲಸಿಕಾ ಕಾರ್ಯಕ್ರಮ

Update: 2024-04-30 15:38 GMT

ಸಾಂದರ್ಭಿಕ ಚಿತ್ರ

ಉಡುಪಿ, ಎ.30: ಎ.ಎಸ್.ಸಿ.ಎ.ಡಿ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಾದ್ಯಂತ ರೇಬೀಸ್ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ನಾಯಿಗಳಿಗೆ ಉಚಿತವಾಗಿ ರೇಬೀಸ್ ಲಸಿಕಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಆದ್ದರಿಂದ ಎಲ್ಲಾ ಜಾತಿಯ ನಾಯಿಗಳ ಮಾಲಕರು ತಮ್ಮ ಸಮೀಪದ ಪಶುವೈದ್ಯಕೀಯ ಸಂಸ್ಥೆಗಳನ್ನು ಸಂಪರ್ಕಿಸಿ, ಅವುಗಳಿಗೆ ಉಚಿತವಾಗಿ ರೇಬೀಸ್ ರೋಗ ನಿಯಂತ್ರಣ ಲಸಿಕೆಯನ್ನು ಹಾಕಿಸುವುದರ ಮೂಲಕ ಇದರ ಸದುಪಯೋಗ ಪಡೆಯಬೇಕೆಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News