ಗ್ಯಾರಂಟಿ ಯೋಜನೆಗೆ ಕತ್ತರಿ ಹಾಕಲು ಬಿಜೆಪಿ ಯತ್ನ: ಮಂಜುನಾಥ ಭಂಡಾರಿ ಆರೋಪ

Update: 2024-04-30 15:44 GMT

ಬೈಂದೂರು, ಎ.30: ರಾಜ್ಯ ಕಾಂಗ್ರೆಸ್ ಸರಕಾರವನ್ನು ಉರುಳಿಸಲು ಬಿಜೆಪಿ ನಾಯಕರು ಕಾಯುತ್ತಿದ್ದಾರೆ. ಈ ಮೂಲಕ ಬಡವರಿಗೆ ನೀಡಿದ್ದ ಜನಪರವಾದ ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕಲು ಯತ್ನಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕಳವಳ ವ್ಯಕ್ತಪಡಿಸಿದ್ದಾರೆ.

ಸಿದ್ಧಾಪುರ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಶಂಕರನಾರಾಯಣ ಪೇಟೆಯ ಅಮ್ಮ ಸಭಾಭವನದಲ್ಲಿ ಮಂಗಳವಾರ ಆಯೋಜಿಸಲಾದ ಕಾಂಗ್ರೆಸ್ ಕಾರ್ಯ ಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡುತಿದ್ದರು.

ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳ ಆಶ್ವಾಸನೆಯನ್ನು ಜನಸಾಮಾನ್ಯರಿಗೆ ನೀಡಿತ್ತು. ಈಗ ಕೊಟ್ಟ ಮಾತಿನಂತೆ ಭರವಸೆಗಳನ್ನು ಈಡೇರಿಸಲಾಗಿದೆ. ಬಿಜೆಪಿಯವರಿಗೆ ಜನಪರ ಯೋಜನೆಗಳನ್ನು ನೀಡಲು ಆಸಕ್ತಿ ಇಲ್ಲ. ಬಿಜೆಪಿ ಪಕ್ಷ ಅಶಕ್ತರನ್ನು ತುಳಿದು ಆಳ್ವಿಕೆ ನಡೆಸುತ್ತಿದೆ ಎಂದರು.

ಬಿಜೆಪಿಯವರು ಜಾತಿ- ಧರ್ಮ, ಭಾವನಾತ್ಮಕ ಹೇಳಿಕೆ ನ್ಡೀುವ ಮೂಲಕ ಸಮಾಜದಲ್ಲಿ ವಿಷ ಬೀಜ ಬಿತ್ತುತ್ತಿದೆ. ಆದ್ದರಿಂದ ಸಮಾಜ ಎಚ್ಚೆತ್ತುಕೊಳ್ಳಬೇಕು ಎಂದು ಅವರು ತಿಳಿಸಿದರು.

ಕೆಪಿಸಿಸಿ ವಕ್ತಾರ ನಿಖೇತ್‌ರಾಜ್ ಮೌರ್ಯ, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ ಕುಮಾರ, ನಟ ಶಿವರಾಜಕುಮಾರ, ಮಾಜಿ ಶಾಸಕರಾದ ಬಿ.ಎಂ.ಸುಕುಮಾರ ಶೆಟ್ಟಿ, ಕೆ.ಗೋಪಾಲ ಪೂಜಾರಿ ಮಾತನಾಡಿದರು.

ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ, ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಮಂಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ, ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ಪ್ರಮುಖರಾದ ಉದಯ ಕುಮಾರ ಶೆಟ್ಟಿ ಮುನಿಯಲ್, ಮಮತಾ ಕಟ್ಟಿ, ರಾಜು ಗೌಡ, ಜಿ.ಎ.ಭಾವ, ಡಿ.ಆರ್.ರಾಜು, ಸದಾಶಿವ ಉಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News