ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ಎನ್ನೆಸ್ಸೆಸ್ ಪಾತ್ರ ಮುಖ್ಯ: ಬಸ್ರೂರು ರಾಜೀವ ಶೆಟ್ಟಿ

Update: 2024-05-02 14:32 GMT

ಉಡುಪಿ, ಮೇ 2: ರಾಷ್ಟ್ರೀಯ ಸೇವಾ ಯೋಜನೆಯು (ಎನ್ನೆಸ್ಸೆಸ್) ಯುವ ಶಕ್ತಿಯ ವ್ಯಕ್ತಿತ್ವ ವಿಕಾಸದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಈ ದೃಷ್ಠಿಯಿಂದ ದೇಶದ ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ಎನ್ನೆಸ್ಸೆಸ್ ಮಹತ್ವದ ಪಾತ್ರ ವಹಿಸುತ್ತದೆ ಎಂದು ಉಡುಪಿ ಜಿಲ್ಲಾ ರೆಡ್‌ಕ್ರಾಸ್‌ನ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಹೇಳಿದ್ದಾರೆ.

ಉಡುಪಿಯ ರೆಡ್‌ಕ್ರಾಸ್ ಭವನದಲ್ಲಿ ನಡೆಯುತ್ತಿರುವ ಉಡುಪಿಯ ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಎಂಜಿಎಂ ಸಂಧಾ ಕಾಲೇಜಿನ ಪ್ರಾಂಶುಪಾಲರಾದ ಡಾ.ದೇವಿಪ್ರಸಾದ್ ಎಸ್ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಣಿಪಾಲ ಆಕಾಡೆಮಿ ಆಫ್ ಜನರಲ್ ಎಜುಕೇಶನ್‌ನ ಕಾರ್ಯದರ್ಶಿ ಬಿ.ಪಿ. ವರದರಾಯ್ ಪೈ, ಕಾಲೇಜಿನ ಕಂಪ್ಯೂಟರ್ ಸಾಯನ್ಸ್ ವಿಭಾಗದ ಪ್ರೊ. ಡಾ.ಎಂ.ವಿಶ್ವನಾಥ ಪೈ, ರೆಡ್‌ಕ್ರಾಸ್ ಸಂಸ್ಥೆ ಗೌರವ ಕಾರ್ಯದರ್ಶಿ ಡಾ. ಗಣನಾಥ್ ಶೆಟ್ಟಿ, ಶಿಬಿರದ ಸಂಯೋಜಕರಾದ ದೀಪಿಕಾ ಮತ್ತು ಸನತ್ ಕೋಟ್ಯಾನ್ ಉಪಸ್ಥಿತರಿದ್ದರು.

ಎನ್ನೆಸ್ಸೆಸ್ ಸ್ವಯಂ ಸೇವಕಿ ಅಂಜಲಿ ಸ್ವಾಗತಿಸಿದರು. ಶ್ರೀಕರ್ ಕಾರ್ಯಕ್ರಮ ನಿರೂಪಿಸಿ, ಸ್ವಾತಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News