ಬುಲೆಟ್ - ಬೈಕ್ ಮಧ್ಯೆ ಅಪಘಾತ: ಸವಾರ ಮೃತ್ಯು

Update: 2024-05-04 15:17 GMT

ಬ್ರಹ್ಮಾವರ : ಬೈಕ್ ಮತ್ತು ಬುಲೆಟ್ ಮಧ್ಯೆ ಮೇ 3ರಂದು ರಾತ್ರಿ ವೇಳೆ ಬ್ರಹ್ಮಾವರ ದೂಪದಕಟ್ಟೆ ಕ್ರಾಸ್ ಬಳಿಯ ಮಂಜುನಾಥ ಗ್ಯಾರೇಜ್ ಎದುರು ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಸತೀಶ್ ಆಚಾರ್ಯ ಎಂದು ಗುರುತಿಸಲಾಗಿದೆ. ಬುಲೆಟ್ ಸವಾರ ಶಾಶ್ವತ್ ತೀವ್ರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬ್ರಹ್ಮಾವರ ಕಡೆಯಿಂದ ಬಂದ ಬುಲೆಟ್ ಉಡುಪಿ ಕಡೆಗೆ ಹೋಗುತ್ತಿದ್ದ ಬೈಕ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಇಬ್ಬರು ಸವಾರರು ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಇವರ ಪೈಕಿ ಗಂಭೀರವಾಗಿ ಗಾಯಗೊಂಡ ಸತೀಶ್ ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News