ಶಿವಮೊಗ್ಗ ಲೋಕಸಭಾ ಕ್ಷೇತ್ರ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮಸ್ಟರಿಂಗ್ ಕಾರ್ಯ

Update: 2024-05-06 14:56 GMT

ಬೈಂದೂರು: ರಾಜ್ಯದಲ್ಲಿ ನಾಳೆ ನಡೆಯುವ ಎರಡನೇ ಹಂತದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕ ಸಭಾ ಕ್ಷೇತ್ರಕ್ಕೆ ಸಂಬಂಧಿಸಿ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಕಾರ್ಯ ಸೋಮವಾರ ನಡೆಯಿತು.

ಬೈಂದೂರು ವಿಧಾನಸಭಾ ಕ್ಷೇತ್ರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್ ಕಾರ್ಯ ಉಡುಪಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆಯಿತು. ಪಿಯು ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಮಸ್ಟರಿಂಗ್ ಕೇಂದ್ರದಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿ ಬಿಗಿ ಪೊಲೀಸ್ ಭದ್ರತೆಯಲ್ಲಿ ತಮ್ಮ ವ್ಯಾಪ್ತಿಯ ಮತಗಟ್ಟೆಗಳಿಗೆ ವ್ಯವಸ್ಥೆ ಮಾಡಲಾದ ವಾಹನಗಳಲ್ಲಿ ತೆರಳಿದರು.

ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 246 ಮತಗಟ್ಟೆಗಳಿಗೆ ಬ್ಯಾಲೆಟ್ ಯುನಿಟ್, ಕಂಟ್ರೋಲ್ ಯುನಿಟ್ ಹಾಗೂ ವಿವಿ ಪ್ಯಾಟ್‌ಗಳೊಂದಿಗೆ ಸಿಬ್ಬಂದಿಗಳು ಸುರಕ್ಷಿತವಾಗಿ ಕೊಂಡೊಯ್ದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ., ಕುಂದಾಪುರದ ಎಸಿ ರಶ್ಮಿ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News