ವಿವಿಧ ಹುದ್ದೆ: ಅರ್ಜಿ ಆಹ್ವಾನ

Update: 2024-05-08 14:59 GMT

ಉಡುಪಿ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಲ್ಲಿ ಹೆಲಿಕಾಪ್ಟರ್-ಎಂ.ಆರ್.ಓ ವಿಭಾಗದ ಸ್ಕೇಲ್ ಡಿ-6 ಹುದ್ದೆ ಹಾಗೂ ದೇಶದ ವಿವಿಧ ಸ್ಥಳಗಳಲ್ಲಿ ಕೆಲಸ ನಿರ್ವಹಿಸಲು ಡಿಪ್ಲೋಮಾ ಇನ್ ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಪದವೀಧರರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

2024ರ ಮೇ1ರಂದು ಅಥವಾ ಅದಕ್ಕೂ ಮೊದಲು ಮಾನ್ಯತೆ ಪಡೆದ ತಾಂತ್ರಿಕ ಮಂಡಳಿಯಿಂದ ಅಗತ್ಯವಿರುವ ಡಿಪ್ಲೋಮಾ ಪದವಿ ಪಡೆದಿರುವ ಆಸಕ್ತ ಅರ್ಹ ಅಭ್ಯರ್ಥಿಗಳು ಮೇ 11ರ ಒಳಗೆ ವೆಬ್‌ಸೈಟ್ - www.hal-india.co.in- ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ ಮಣಿಪಾಲ ಉಡುಪಿ, ದೂ.ಸಂ: 080-22323231ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾ ಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News