×
Ad

ಶಾಂತನು ಶೆಟ್ಟಿ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ

Update: 2024-05-26 18:42 IST

ಮಣಿಪಾಲ, ಮೇ 26: ಮಣಿಪಾಲ ಶಾಂತನು ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಸಹಯೋಗ ದೊಂದಿಗೆ ಶಾಂತನು ಶೆಟ್ಟಿ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ ರವಿವಾರ ಪರ್ಕಳ ಶ್ರೀನಿವಾಸ ಪೈ ಪ್ರಸನ್ನ ಸೇವಾ ಮಂದಿರ ಸಭಾಂಗಣದಲ್ಲಿ ಜರಗಿತು.

ಮುಖ್ಯ ಅತಿಥಿಗಳಾಗಿ ಶಾಂತನು ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸೋಮನಾಥ ಶೆಟ್ಟಿ, ಮಾಹೆ ಸಹ ಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್, ಉಪಕುಲಪತಿ ಲೆಫ್ಟಿನೆಂಟ್ ಜನರಲ್ ಡಾ.ಎಂ.ಡಿ.ವೆಂಕಟೇಶ್ ಮಾತನಾಡಿದರು. ಉಡುಪಿ ಡಾ.ಟಿಎಂಎ ಪೈ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶಶಿಕಿರಣ್ ಉಮಾಕಾಂತ್ ಅಧ್ಯಕ್ಷತೆ ವಹಿಸಿದ್ದರು.

ಸಹ ಕುಲಪತಿ(ಆರೋಗ್ಯ ವಿಜ್ಞಾನ) ಡಾ.ಶರತ್ ಕೆ.ರಾವ್, ಮಾಹೆ ಬೋಧನಾ ಆಸ್ಪತ್ರೆಗಳ ಸಿಓಓ ಡಾ.ಆನಂದ್ ವೇಣು ಗೋಪಾಲ್, ಕೆಎಂಸಿ ಡೀನ್ ಡಾ.ಪದ್ಮರಾಜ್ ಹೆಗ್ಡೆ, ಉಪಸ್ಥಿತರಿದ್ದರು. ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಆರೋಗ್ಯ ಕಾರ್ಡ್‌ನ ಪ್ರಯೋಜನಗಳ ಕುರಿತು ವಿವರಿಸಿದರು. ಟ್ರಸ್ಟ್‌ನ ನಟರಾಜ್ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News