×
Ad

ಮತದಾನ: ರಾಜ್ಯಮಟ್ಟದ ಛಾಯಾ ಚಿತ್ರಸ್ಪರ್ಧೆ ವಿಜೇತರು

Update: 2024-05-27 20:33 IST

ಫಸ್ಟ್‌ ಪ್ರೈಝ್

ಉಡುಪಿ: 2024ರ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ರಾಜ್ಯದ ಮಾಧ್ಯಮಗಳ ಹಾಗೂ ಹವ್ಯಾಸಿ ಛಾಯಾಗ್ರಾಹಕ ರಿಗಾಗಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯ ವಿಜೇತರ ಹೆಸರುಗಳನ್ನು ಪ್ರಕಟಿಸಲಾಗಿದೆ.

ಪ್ರಜಾವಾಣಿ/ಡೆಕ್ಕನ್ ಹೆರಾಲ್ಡ್ ದಿನಪತ್ರಿಕೆಗಳ ಮಂಗಳೂರು ಬ್ಯುರೋದ ಛಾಯಾಗ್ರಾಹಕ ಹೆಚ್ ಫಕ್ರುದ್ದೀನ್ ಅವರು ತೆಗೆದ ಚಿತ್ರ ಪ್ರಥಮ ಬಹುಮಾನಕ್ಕೆ ಆಯ್ಕೆಯಾಗಿದೆ. ಬಾಗಲಕೋಟೆಯ ಹಳ್ಳಿ ಸಂದೇಶ ಪತ್ರಿಕೆಯ ಇಂದ್ರಕುಮಾರ್ ಬಿ ದಸ್ತೇನವರ ಚಿತ್ರ ದ್ವಿತೀಯ ಬಹುಮಾನ ಪಡೆದಿದೆ.

ಮೂಡಬಿದಿರೆಯ ಹವ್ಯಾಸಿ ಛಾಯಾಗ್ರಾಹಕ ಜಿನೇಶ್ ಪ್ರಸಾದ್ ತೃತೀಯ ಬಹುಮಾನ ಪಡೆದರೆ ಸಮಾಧಾನಕರ ಬಹುಮಾನಕ್ಕೆ ಇಬ್ಬರು -ಉದಯವಾಣಿ ಪತ್ರಿಕೆಯ ಮಣಿಪಾಲದ ಛಾಯಾಗ್ರಾಹಕ ಅಸ್ಟ್ರೋ ಮೋಹನ್ ಹಾಗೂ ಬೆಂಗಳೂರಿನ ಸಂಜೆ ಸಮಯ ಪತ್ರಿಕೆಯ ಪೂರ್ಣಿಮ ರವಿ ಆಯ್ಕೆಯಾಗಿದ್ದಾರೆ.

ವಿಶೇಷ ಬಹುಮಾನಕ್ಕೆ ಸಹ ಇಬ್ಬರು ಆಯ್ಕೆಯಾಗಿದ್ದು, ಮೈಸೂರಿನ ವಿಜಯವಾಣಿ ಪತ್ರಿಕೆಯ ಕೆ.ಹೆಚ್ ಚಂದ್ರು ಹಾಗೂ ಕಲಬುರಗಿಯ ವಿಜಯ ಕರ್ನಾಟಕ ಪತ್ರಿಕೆಯ ಶಿವಶರಣಪ್ಪ ಬೆನ್ನೂರ್ ಅವರು ತೆಗೆದ ಚಿತ್ರಗಳು ಆಯ್ಕೆಯಾಗಿವೆ. ಪ್ರಶಸ್ತಿ ಗಳಿಗೆ ಆಯ್ಕೆಯಾದ ಛಾಯಾಚಿತ್ರಗಳನ್ನು ತೆಗೆದ ಛಾಯಾಗ್ರಾಹಕರಿಗೆ ಪ್ರಮಾಣ ಪತ್ರ ಹಾಗೂ ನಗದು ಬಹುಮಾನವನ್ನು ನೀಡಲಾಗುವುದು.

ರಾಜ್ಯಮಟ್ಟದ ಈ ಛಾಯಾಚಿತ್ರ ಸ್ಪರ್ಧೆಯ ಆಯ್ಕೆ ಸಮಿತಿಯಲ್ಲಿ ಅಧ್ಯಕ್ಷರಾಗಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಮಾಧ್ಯಮ ವಿಭಾಗದ ವಿಶೇಷ ಅಧಿಕಾರಿ ಎ.ವಿ.ಸೂರ್ಯಸೇನ್, ಐಎಫ್‌ಎಸ್ ಸದಸ್ಯರಾಗಿ ರಾಜ್ಯಮಟ್ಟದ ಸ್ವೀಪ್‌ನ ಹಿರಿಯ ಸಮಾಲೋಚಕರಾದ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್.ವಸ್ತ್ರದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಛಾಯಾಚಿತ್ರ ವಿಭಾಗದ ಅಧಿಕಾರಿ ಚಂದ್ರಶೇಖರ್, ನಿವೃತ್ತ ಹಿರಿಯ ಪತ್ರಿಕಾ ಛಾಯಾಗ್ರಾಹಕರಾದ ವಿಶ್ವ ನಾಥ್ ಸುವರ್ಣ ಹಾಗೂ ಸದಸ್ಯ ಕಾರ್ಯದರ್ಶಿಯಾಗಿ ಹಿರಿಯ ಸಹಾಯಕ ನಿರ್ದೇಶಕರಾದ ಜಡಿಯಪ್ಪ ಗೆದ್ಲಗಟ್ಟಿ ಅವ ರನ್ನು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ನೇಮಿಸಲಾಗಿತ್ತು.

ರಾಜ್ಯಮಟ್ಟದ ಈ ಸ್ಪರ್ಧೆಯಲ್ಲಿ ಮಾಧ್ಯಮಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಾಹಕರು ಸೇರಿದಂತೆ ಒಟ್ಟು 219 ಮಂದಿ ಭಾಗವಹಿಸಿದ್ದು, ಛಾಯಾಗ್ರಾಹಕರು ತಾವು ತೆಗೆದ ಗರಿಷ್ಠ ೫ ಅತ್ಯುತ್ತಮ ಛಾಯಾಚಿತ್ರ ಗಳನ್ನು ಕಳುಹಿಸಿದ್ದರು. ಪ್ರಶಸ್ತಿಗೆ ಆಯ್ಕೆ ಯಾದ ಎಲ್ಲರಿಗೂ ಮುಖ್ಯ ಚುನಾವಣಾಧಿಕಾರಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.






Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News