×
Ad

ಮತ ಎಣಿಕೆ| ಉಡುಪಿ: ಸಂಚಾರ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆ

Update: 2024-05-29 21:53 IST

ಸಾಂದರ್ಭಿಕ ಚಿತ್ರ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆಯ ಮತ ಎಣಿಕಾ ಕಾರ್ಯವು ಜೂನ್ 4ರಂದು ಉಡುಪಿ ಬ್ರಹ್ಮಗಿರಿಯ ಸೈಂಟ್ ಸಿಸಿಲೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಅಂದು ಬೆಳಗ್ಗೆ 5 ಗಂಟೆ ಯಿಂದ ಮತ ಎಣಿಕೆ ಮುಗಿಯುವವರೆಗೆ ಈ ರಸ್ತೆಯಲ್ಲಿ ಸಾರ್ವಜನಿಕ ಸಂಚಾರ ವ್ಯವಸ್ಥೆಯಲ್ಲಿ ಈ ಕೆಳಗಿನಂತೆ ಮಾರ್ಪಾಡು ಗಳನ್ನು ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಜೂನ್ 4ರಂದು ಬ್ರಹ್ಮಗಿರಿ ಜಂಕ್ಷನ್‌ನಿಂದ ನಾಯಕ್ ಕ್ಯಾಂಟೀನ್‌ವರೆಗಿನ ಮತ್ತು ಅಜ್ಜರಕಾಡು ಜಂಕ್ಷನ್‌ನಿಂದ ಸುದರ್ಶನ್ ರೆಸಿಡೆನ್ಸಿವರೆಗಿನ ರಸ್ತೆಯಲ್ಲಿ ಸಂಚಾರವನ್ನು ನಿಷೇಧಿಸಿದ್ದು, ಬದಲಿ ಮಾರ್ಗದಲ್ಲಿ ಸಂಚರಿಸಬೇಕು.

ಮತ ಎಣಿಕೆಯ ಸಂಬಂಧ ಸರಕಾರಿ ಅಧಿಕಾರಿಗಳ ವಾಹನಗಳ ಪಾರ್ಕಿಂಗ್ ದೃಷ್ಟಿಯಿಂದ ಜೂನ್ 4ರಂದು ಬ್ರಹ್ಮಗಿರಿ ಜಂಕ್ಷನ್‌ನಿಂದ ಅಜ್ಜರಕಾಡು ಜಂಕ್ಷನ್‌ವರೆಗಿನ ರಸ್ತೆಯಲ್ಲಿ ಸಂಚಾರ ನಿಷೇಧಿಸಲಾಗಿದೆ ಹಾಗೂ ಅಜ್ಜರಕಾಡು ಜಂಕ್ಷನ್‌ನಿಂದ ಬ್ರಹ್ಮಗಿರಿ ಜಂಕ್ಷನ್‌ವರೆಗಿನ ರಸ್ತೆಯನ್ನು ಏಕಮುಖ ಸಂಚಾರ ರಸ್ತೆಯನ್ನಾಗಿ ಬದಲಾಯಿಸಲಾಗಿದೆ.

ಈ ಅಧಿಸೂಚನೆಯನ್ನು ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ನಿಯಮ 1989ರ ನಿಯಮ 221 (5)(ಎ) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾುಯಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿ ಕಾರಿ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News