×
Ad

ಸರಕಾರಿ ಬಸ್ಸಿಗಾಗಿ ಹಕ್ಲಾಡಿ ಗ್ರಾಮಸ್ಥರಿಂದ ಧರಣಿ

Update: 2024-06-24 19:06 IST

ಉಡುಪಿ, ಜೂ.24: ಹಕ್ಲಾಡಿ ಗ್ರಾಮದ ಸುತ್ತಮುತ್ತಲ ದೇವಲ್ಕುಂದ, ಬಗ್ವಾಡಿ, ನೂಜಾಡಿ, ಬ್ರಹ್ಮೇರಿ, ಹಳ್ಳಿಜೆಡ್ಡು, ಹೊರ್ನಿ, ಕಟ್ಟಿನಮಕ್ಕಿ, ಮಾಣಿ ಕೊಳಲು, ಕುಂದಬಾರಂದಾಡಿ, ಬಗ್ವಾಡಿ, ದೇವಲ್ಕುಂದ ಮಾರ್ಗವಾಗಿ ಕುಂದಾಪುರಕ್ಕೆ ಸರಕಾರಿ ಬಸ್ ಓಡಿಸುವಂತೆ ಆಗ್ರಹಿಸಿ ಹಕ್ಲಾಡಿ ಗ್ರಾಮಸ್ಥರು ಇಂದು ಹಕ್ಲಾಡಿ ಗ್ರಾಮ ಪಂಚಾಯತ್ ಎದುರುಗಡೆ ಧರಣಿ ನಡೆಸಿದರು.

ಪ್ರತಿಭಟನೆಯನ್ನುದ್ದೇಶಿಸಿ ನಾಡ ಗ್ರಾಮ ಪಂಚಾಯತ್ ಸದಸ್ಯ ರಾಜೀವ ಪಡುಕೋಣೆ, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಸುರೇಶ್ ಕಲ್ಲಾಗರ, ಜಿಲ್ಲಾ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಕೋಣಿ, ತಾಲೂಕು ಕಾರ್ಯದರ್ಶಿ ನಾಗರತ್ನ ನಾಡ ಮಾತನಾಡಿದರು.

ಈ ಕುರಿತ ಮನವಿಯನ್ನು ಹಕ್ಲಾಡಿ ಗ್ರಾಪಂ ಅಧ್ಯಕ್ಷೆ ಪ್ರೇಮ ದೇವಾಡಿಗ ಹಾಗೂ ಅಭಿವೃದ್ಧಿ ಅಧಿಕಾರಿ ಸತೀಶ್ ಮೂಲಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ್ ಹೆಮ್ಮಾಡಿ, ನಾಡ ಗ್ರಾಪಂ ಸದಸ್ಯೆ ಶೋಭ ಕೆರೆಮನೆ ನಾಡ, ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಬೈಂದೂರು ಅಧ್ಯಕ್ಷೆ ಮನೋರಮ ಭಂಡಾರಿ, ಕುಂದ ಬಾರಂದಾಡಿ ಕಟ್ಟಡ ಕಾರ್ಮಿಕರ ಅಧ್ಯಕ್ಷ ಮಹಾದೇವ ಆಚಾರ್, ಕಾರ್ಯದರ್ಶಿ ಮಂಜುನಾಥ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News