ಪಡುಬಿದ್ರಿ: ಕಡಲು ಕೊರೆತ ಪ್ರದೇಶಕ್ಕೆ ಕಾಪು ಶಾಸಕರ ಭೇಟಿ
Update: 2024-06-24 20:24 IST
ಕಾಪು, ಜೂ.24: ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರಿ ಗ್ರಾಪಂ ವ್ಯಾಪ್ತಿಯ ನಡಿಪಟ್ನದಲ್ಲಿ ಭಾಗದಲ್ಲಿ ಕಡಲ್ಕೊರೆತ ಉಂಟಾದ ಪ್ರದೇಶಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾಪು ತಹಶೀಲ್ದಾರ್ ಸೇರಿದಂತೆ ಇಲಾಖಾಧಿ ಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಳೆಗಾಲದಲ್ಲಿ ಈ ಭಾಗದಲ್ಲಿ ಕಡಲ ಕೊರೆತದ ಸಮಸ್ಯೆ ಅಧಿಕವಾಗಲಿ ರುವುದರಿಂದ ಇದಕ್ಕೆ ಬೇಕಾದ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ, ಕಡಲು ಕೊರೆತ ಕಂಡುಬಂದ ಪ್ರದೇಶಗಳಲ್ಲಿ ತುರ್ತು ನಿರ್ವಹಣೆಗೆ ಮುಂದಾಗುವಂತೆ ಅವರು ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರಾದ ವಿದ್ಯಾಶ್ರೀ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಶಿಕಾಂತ್ ಪಡುಬಿದ್ರಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ನೀತಾ ಗುರುರಾಜ್ ಹಾಗೂ ಕಾಪು ತಹಶೀಲ್ದಾರರಾದ ಪ್ರತಿಭಾ, ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಸಹಾಯಕ ಅಭಿಯಂತರ ಜಯರಾಜ್ ಉಪಸ್ಥಿತರಿದ್ದರು.