×
Ad

ಶಿಕ್ಷಕರ ಅರ್ಹತಾ ಪರೀಕ್ಷೆ: ನಿಷೇಧಾಜ್ಞೆ ಜಾರಿ

Update: 2024-06-27 20:59 IST

ಉಡುಪಿ, ಜೂ.27: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ (ಕೆಎಆರ್‌ಟಿಇಟಿ 2024) ಸ್ಪರ್ಧಾತ್ಮಕ ಪರೀಕ್ಷೆಯು ಜೂನ್ 30ರಂದು ಜಿಲ್ಲೆಯ ಒಟ್ಟು 07 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

ಈ ಪರೀಕ್ಷೆಯನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ.ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸಿಆರ್‌ಪಿಸಿ ಕಾಯ್ದೆಯನ್ವಯ ಸೆಕ್ಷನ್ 144(1)ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News