×
Ad

ಕಲ್ಸಂಕ ತೋಡಿಗೆ ಸುರಕ್ಷತಾ ತಡೆಗೋಡೆ ನಿರ್ಮಿಸಲು ಸೂಚನೆ

Update: 2024-06-29 19:10 IST

ಉಡುಪಿ, ಜೂ.29: ಕಲ್ಸಂಕದಿಂದ ಕೃಷ್ಣ ಮಠ ಪಾರ್ಕಿಂಗ್ ಸಂಪರ್ಕಿಸುವ ರಸ್ತೆಯ ಇಕ್ಕೆಲಗಳ ತೋಡಿಗೆ ತಕ್ಷಣ ಸುರಕ್ಷತಾ ತಡೆಗೋಡೆ ನಿರ್ಮಿಸಲು ಕ್ರಮ ವಹಿಸುವಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ನಗರಸಭೆ ಅಧಿಕಾರಿ ಗಳಿಗೆ ಸೂಚನೆ ನೀಡಿದರು.

ಕೆಲವು ದಿನಗಳ ಹಿಂದೆ ರಿಕ್ಷಾ ತೋಡಿಗೆ ಬಿದ್ದ ಘಟನೆ ಹಿನ್ನೆಲೆಯಲ್ಲಿ ದಿನಂಪ್ರತಿ ಸಾವಿರಾರು ಮಂದಿ ಸಂಚರಿಸುವ ರಸ್ತೆ ಸಂಚಾರದ ಸುರಕ್ಷತೆ ದೃಷ್ಟಿಯಿಂದ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಶಿಥಿಲಗೊಂಡಿರುವ ತೋಡಿನ ಬದಿಗಳ ಮರು ನಿರ್ಮಾಣಕ್ಕೆ ಸಣ್ಣ ನೀರಾವರಿ ಇಲಾಖೆ ಮೂಲಕ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆಯ ಸದಸ್ಯರಾದ ಗಿರೀಶ್ ಅಂಚನ್, ಬಾಲಕೃಷ್ಣ ಶೆಟ್ಟಿ, ನಗರಸಭೆ ಎಇಇ ದುರ್ಗಾಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News