×
Ad

ಮರು ವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಕಾರ್ಯಕ್ರಮ

Update: 2024-06-29 21:34 IST

ಉಡುಪಿ, ಜೂ.29: 2024-25ನೇ ಸಾಲಿನ ಮರು ವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಕಾರ್ಯಕ್ರಮ ದಡಿ ಜಿಲ್ಲೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ವೈಪರಿತ್ಯದಿಂದಾಗಿ ಉಂಟಾಗುವ ಬೆಳೆ ನಷ್ಟಕ್ಕೆ ಮುಂಗಾರು ಹಂಗಾಮಿಗೆ ಈ ಯೋಜನೆಯಡಿ ನೊಂದಣಿ ಮಾಡಿಕೊಳ್ಳಲು ರೈತರಿಗೆ ಅವಕಾಶ ಕಲ್ಪಿಸಲಾಗಿದೆ. ರೈತರ ಪಹಣಿ ಯಲ್ಲಿ ಬೆಳೆ ಸಮೀಕ್ಷೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ನಮೂದಾಗಿರುವ ಬೆಳೆ ವಿಸ್ತೀರ್ಣಕ್ಕೆ ಅನುಗುಣವಾಗಿ ವಿಮಾ ಮೊತ್ತವನ್ನು ಪಾವತಿಸಿ ಯೋಜನೆಯಲ್ಲಿ ಪಾಲ್ಗೊಳ್ಳಬಹುದು.

ಯೋಜನೆಯಲ್ಲಿ ನೊಂದಣಿ ಮಾಡಿಸಲು ಜುಲೈ 1 ಕೊನೆಯ ದಿನ. ರೈತರು ವಿಮಾ ಕಂತುಗಳನ್ನು ಪಾವತಿಸಲು ನಿಗದಿತ ದಾಖಲೆಗಳೊಂದಿಗೆ ಹತ್ತಿರದ ಬ್ಯಾಂಕ್ ಮತ್ತು ಡಿಜಿಟಲ್ ಇ-ಸೇವಾ ಕೇಂದ್ರಗಳನ್ನು ಸಂಪರ್ಕಿಸ ಬಹುದು. ಬೆಳೆ ವಿಮಾ ಯೋಜನೆಯಲ್ಲಿ ಗ್ರಾಮ ಪಂಚಾಯತ್‌ಗಳನ್ನು ಮಾ ಘಟಕಗಳಾಗಿ ಸರಕಾರದ ಆದೇಶದಲ್ಲಿ ಅಧಿಸೂಚಿಸಲಾಗಿದ್ದು ಅಡಿಕೆ ಹಾಗೂ ಕಾಳುಮೆಣಸು ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರು ಪಾಲ್ಗೊಳ್ಳಬಹುದಾಗಿದೆ.

ಬೆಳೆ ಸಾಲ ಪಡೆಯದ ರೈತರಿಗೆ ಈ ಯೋಜನೆಯು ಐಚ್ಚಿಕವಾಗಿದ್ದು ಬೆಳೆ ಸಾಲ ಪಡೆದ ರೈತರು ಯೋಜನೆಯಲ್ಲಿ ಪಾಲ್ಗೊ ಳ್ಳದೇ ಇರಲು ಇಚ್ಚಿಸಿದಲ್ಲಿ ನೊಂದಣಿಯ ಅಂತಿಮ ದಿನಾಂಕದ ಒಂದು ವಾರದೊಳಗೆ ಮುಚ್ಚಳಿಕೆ ಪತ್ರವನ್ನು ಬೆಳೆ ಸಾಲ ಪಡೆದ ಹಣಕಾಸು ಸಂಸ್ಥೆಗೆ ನೀಡಬೇಕಾಗಿದೆ. ವಿಮೆ ಮಾಡಿಸುವ ರೈತರು ಫ್ರುಟ್ ತಂತ್ರಾಂಶದ ನೊಂದಣಿ ಸಂಖ್ಯೆಯನ್ನು ಹೊಂದಿರಬೇಕಿದ್ದು ನೊಂದಣಿ ಸಂಖ್ಯೆಗೆ ಪಹಣಿ ವಿವರವನ್ನು ಜೋಡಿಸಿ ಕೊಳ್ಳಬೇಕಿದೆ.

ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ವಾಣಿಜ್ಯ, ಗ್ರಾಮೀಣ ಸಹಕಾರಿ ಬ್ಯಾಂಕ್, ಹೋಬಳಿ ರೈತ ಸಂಪರ್ಕ ಕೇಂದ್ರ, ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿಲ್ಲಾ ತೋಟಗಾರಿಕೆ ಉಪನಿರ್ದೇಶಕರ ಕಛೇರಿಯನ್ನು ಸಂಪರ್ಕಿಸ ಬಹುದು ಎಂದು ಜಿಲ್ಲಾ ಪಂಚಾಯತ್ ತೋಟಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News