×
Ad

ಸಾಂಕ್ರಮಿಕ ರೋಗ ತಡೆಗಟ್ಟಲು ಮುಂಜಾಗ್ರತಾ ಕ್ರಮ ವಹಿಸಿ: ಶಾಸಕ ಯಶ್‌ಪಾಲ್ ಸುವರ್ಣ

Update: 2024-06-29 21:37 IST

ಉಡುಪಿ, ಜೂ.29: ಶಾಲೆ, ಹಾಸ್ಟೆಲ್‌ಗಳಲ್ಲಿ ಸ್ವಚ್ಛತೆಯನ್ನು ಕಾಯ್ದು ಕೊಳ್ಳುವ ಕುರಿತು ಆದ್ಯತೆ ನೀಡಬೇಕು. ಶಾಲೆಗಳಲ್ಲಿ, ವಲಸೆ ಕಾರ್ಮಿಕರು ಹೆಚ್ಚಾಗಿರುವ ಸ್ಥಳಗಳಲ್ಲಿ, ಮೀನುಗಾರಿಕಾ ಪ್ರದೇಶಗಳಲ್ಲಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ ಗಳಲ್ಲಿ ಕೀಟನಾಶಕ ಸಿಂಪಡಣೆ ಮಾಡುವು ದರೊಂದಿಗೆ ಅಗತ್ಯ ಮುಂಜಾಗೃತಾ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಯಶ್‌ಪಾಲ್ ಸುವರ್ಣ ಸೂಚನೆ ನೀಡಿದ್ದಾರೆ.

ಉಡುಪಿ ನಗರಸಭಾ ಕಚೇರಿಯಲ್ಲಿ ಶುಕ್ರವಾರ ಸಾಂಕ್ರಮಿಕ ರೋಗಗಳ ತಡೆಗೆ ಮುಂಜಾಗೃತಾ ಕ್ರಮದ ಬಗ್ಗೆ ನಗರಸಭೆ ಹಾಗೂ ಆರೋಗ್ಯ ಇಲಾಖೆ ಯೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಗೆ ಹೊರರಾಜ್ಯದಿಂದ ಬರುವ ಕಾರ್ಮಿಕರ ಸಂಖ್ಯೆ ಹೆಚ್ಚಾಗಿರು ವುದರಿಂದ ಅವರಿಂದ ಸಾಂಕ್ರಮಿಕ ರೋಗಗಳು ಹರಡುವ ಭೀತಿ ಹೆಚ್ಚಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಗಮನ ಹರಿಸಬೇಕು. ನಗರಸಭಾ ವ್ಯಾಪ್ತಿಯ ಹೋಟೆಲ್, ಲಾಡ್ಜ್‌ಗಳಲ್ಲಿ ಕಿಟಕಿಗಳಿಗೆ ಕಡ್ಡಾಯವಾಗಿ ಸೊಳ್ಳೆ ಪರದೆ ಹಾಕುವಂತೆ ಕ್ರಮ ಕೈಗೊಳ್ಳಬೇಕು ಎಂದರು.

ನಗರದ ಬನ್ನಂಜೆಯಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕೊಳಚೆ ನೀರನ್ನು ನೇರವಾಗಿ ಒಳಚರಂಡಿಗೆ ಬಿಟ್ಟಿರುವು ದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ ಈ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮ ಕೈಗಳ್ಳುವಂತೆ ಕೆಎಸ್‌ಆರ್‌ಟಿಸಿ ಅಧಿಕಾರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ನಗರಸಭಾ ಪೌರಾಯುಕ್ತ ರಾಯಪ್ಪ, ಪರಿಸರ ಅಭಿಯಂತರ ಸ್ನೇಹ ಕೆಎಸ್, ಪ್ರಭಾರ ಆರೋಗ್ಯ ನಿರೀಕ್ಷಕರಾದ ಮನೋಹರ್, ಸುರೇಂದ್ರ ಹೋಬಳಿದಾರ್, ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಮಾಜ ಕಲ್ಯಾಣ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕೆಎಸ್‌ಆರ್‌ಟಿಸಿ ಅಧಿಕಾರಿಗಳು, ಬಿಸಿಎಂ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News