ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಆರತಿ ಕೃಷ್ಣ ಭೇಟಿ
Update: 2024-07-03 18:01 IST
ಉಡುಪಿ: ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರು, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಡಾ.ಆರತಿ ಕೃಷ್ಣ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಮುಖ್ಯಸ್ಥ ಡಾ.ಜಿ ಶಂಕರ್, ಡಾ.ಆರತಿ ಕೃಷ್ಣ ಅವರನ್ನು ಗೌರವಿಸಿ ದರು. ನಂತರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ಗೀತಾ ಮಂದಿರದಲ್ಲಿ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಕಾಂಗ್ರೆಸ್ ಮುಖಂಡರಾದ ಗಣೇಶ್ ನೆರ್ಗಿ, ಶರತ್ ಶೆಟ್ಟಿ, ವಿಶ್ವಾಸ್ ಅಮೀನ್, ಸೌರಭ್ ಬಲ್ಲಾಳ್, ಸತೀಶ್ ಕುಮಾರ್ ಮಂಚಿ ಮೊದಲಾದವರು ಉಪಸ್ಥಿತರಿದ್ದರು.