ಉಡುಪಿಯಲ್ಲಿ ಕೊರಗ ಸಮುದಾಯದ ಧರಣಿ: ಸ್ಪೀಕರ್ ಖಾದರ್ ಭೇಟಿಯಾದ ಶಾಸಕ ಯಶ್‌ಪಾಲ್
ಉಡುಪಿ: ಉಡುಪಿಯಲ್ಲಿ ಕೊರಗ ಸಮುದಾಯದ ಸಂಘಟನೆಗಳು ತಮ್ಮ ನ್ಯಾಯ ಸಮ್ಮತ ಬೇಡಿಕೆಗಳಾದ ಭೂಮಿ ಹಕ್ಕು, ವಿದ್ಯಾವಂತ ನಿರುದ್ಯೋಗಿ ಯುವ ಜನತೆಗೆ ಅರ್ಹ ಉದ್ಯೋಗ ಹಾಗೂ ಪರಿಶಿಷ್ಟ ಪಂಗಡದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆಗ್ರಹಿಸಿ ಮೂರು ದಿನಗಳಿಂದ ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಇಂದು ಬೆಂಗಳೂರಿನಲ್ಲಿ ಭೇಟಿಯಾದ ಉಡುಪಿ ಶಾಸಕ ಯಶಪಾಲ್ ಸುವರ್ಣ, ಕೊರಗ ಸಮುದಾಯದ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯ ಸರಕಾರ ತಕ್ಷಣ ಸ್ಪಂದಿಸುವಂತೆ ಸೂಚನೆ ನೀಡಬೇಕೆಂದು ಮನವಿ ಮಾಡಿದರು.
ಈಗಾಗಲೇ ರಾಜ್ಯ ಸರಕಾರ ಪ್ರವಾಸಿ ವಾಹನಗಳಿಗೆ ಪ್ಯಾನಿಕ್ ಬಟನ್ ಹಾಗೂ ಜಿಪಿಎಸ್ ಕಡ್ಡಾಯ ಅಳವಡಿಕೆಗೆ ನೀಡಿರುವ ಕಾಲಾವಕಾಶ ವಿಸ್ತರಣೆ ಸಹಿತ ವಿವಿಧ ಸಮಸ್ಯೆ ಹಾಗೂ ಟ್ಯಾಕ್ಸಿಮನ್ ಅಸೋಸಿಯೇಶನ್ ಬೇಡಿಕೆಗಳ ಬಗ್ಗೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲೂ ಸರಕಾರಕ್ಕೆ ನಿರ್ದೇಶನ ನೀಡುವಂತೆಯೂ ಅವರು ಕೋರಿದರು.
ಅಲ್ಲದೇ, ಕೊರಗ ಸಮುದಾಯ ಹಾಗೂ ಟ್ಯಾಕ್ಸಿ ಅಸೋಸಿಯೇಶನ್ ಬೇಡಿಕೆಗಳ ಬಗ್ಗೆ ಸದನದಲ್ಲಿ ಶೂನ್ಯ ವೇಳೆಯಲ್ಲಿ ಚರ್ಚಿಸಿ ಸರ್ಕಾರದ ಗಮನ ಸೆಳೆಯಲು ಅವಕಾಶ ನೀಡುವಂತೆಯೂ ಯಶಪಾಲ್ ಸಭಾಧ್ಯಕ್ಷರಿಗೆ ಮನವಿ ಸಲ್ಲಿಸಿದರು.