×
Ad

ಉಡುಪಿ ನಗರಸಭೆಯಿಂದ ನಿಷೇಧಿತ ಪ್ಲಾಸ್ಟಿಕ್ ವಶ

Update: 2024-07-27 19:39 IST

ಉಡುಪಿ: ಉಡುಪಿ ನಗರಸಭೆಯ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ನಗರ ಸಭೆಯ ವತಿಯಿಂದ ನಿರಂತರ ಕಾರ್ಯಾಚರಣೆ ನಡೆಯುತ್ತಿದ್ದು, ಬುಧವಾರ ನಗರದ ಸಿಟಿ ಬಸ್ ನಿಲ್ದಾಣ ಸಮೀಪದ ಮಾರ್ಕೆಟಿಂಗ್ ಉದ್ದಿಮೆಯೊಂದರಲ್ಲಿ ೪೧೫ ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಅನ್ನು ವಶಕ್ಕೆ ಪಡೆದು 5000ರೂ.ದಂಡ ವಿಧಿಸಲಾಯಿತು.

ಕಾರ್ಯಾಚರಣೆಯಲ್ಲಿ ನಗರಸಭೆಯ ಪರಿಸರ ಅಭಿಯಂತರರಾದ ಸ್ನೇಹ ಕೆ.ಎಸ್, ಪ್ರಭಾರ ಆರೋಗ್ಯ ನಿರೀಕ್ಷಕ ಸುರೇಂದ್ರ ಹೋಬಳಿದಾರ್, ಸೂಪರ್ ವೈಸರ್‌ಗಳಾದ ಭೋಜ ನಾಯ್ಕ್, ಸುರೇಶ್ ಶೆಟ್ಟಿ, ನಾಗರ್ಜುನ್ ಹಾಗೂ ಇತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News