×
Ad

ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ

Update: 2024-07-28 21:00 IST

ಕಾರ್ಕಳ: ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಮನನೊಂದ ರೆಂಜಾಳ ಗ್ರಾಮದ ಗಣೇಶ್ (26) ಎಂಬವರು ಜು.27ರಂದು ಸಂಜೆ ವೇಳೆ ರೆಂಜಾಳ ಗ್ರಾಮದ ಸರಕಾರಿ ಶಾಲೆಯ ಬಳಿಯ ಕಲ್ಕದಬೆಟ್ಟು ಹಾಡಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ ನಗರ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಿಯ್ಯಾರು ಗ್ರಾಮದ ಕುಂಟಿಬೈಲು ಪೊಸರುಗುಟ್ಟೆ ನಿವಾಸಿ ಗುಲಾಬಿ(63) ಎಂಬವರು ಜು.27ರಂದು ರಾತ್ರಿ ವೇಳೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News