ವಿವಿಧ ಯೋಜನೆಯಡಿ ಸಾಲ ಸೌಲಭ್ಯ: ಅರ್ಜಿ ಆಹ್ವಾನ
ಉಡುಪಿ: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದ ಸೌಲಭ್ಯಗಳಾದ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ ಹಾಗೂ ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಅರ್ಹ ಫಲಾನುಭಗಳಿಂದ ಸೇವಾಸಿಂಧು ತಂತ್ರಾಂಶ - http://sevasindhu.karnataka.gov.in- ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ ೩೧ ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ - www.kssd.karnataka.gov.in- ಅಥವಾ ಸಹಾಯವಾಣಿ ಸಂಖ್ಯೆ: 080-22374832, 8050770004, 8050770005 ಅಥವಾ 0820-2574882 ಅನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.