×
Ad

ಉದ್ಯಾವರ: ಸ್ನೇಹಾಲಯಕ್ಕೆ ದಿನಸಿ ವಸ್ತುಗಳ ವಿತರಣೆ

Update: 2024-09-28 19:50 IST

ಉಡುಪಿ: ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಉಡುಪಿ ಎರಡನೇ ವರ್ಷಕ್ಕೆ ಪಾದರ್ಪಣೆ ಗೊಂಡ ಹಿನ್ನೆಲೆಯಲ್ಲಿ ಉದ್ಯಾವರದ ಸೈಂಟ್ ವಿನ್ಸೆಂಟ್ ಪಲ್ಲೊಟ್ಟಿ ಕಾನ್ವೆಂಟನ ಸ್ನೇಹಾಲಯದ ವಿದ್ಯಾರ್ಥಿಗಳಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು.

ಅಧ್ಯಕ್ಷತೆಯನ್ನು ಸಂಸ್ಥೆಯ ಸಂಸ್ಥಾಪಕರು ಮತ್ತು ವ್ಯವಸ್ಥಾಪಕ ನಿರ್ದೇಶಕ ಜೀವನ್ ಡಿಸೋಜ ವಹಿಸಿದ್ದರು. ಮುಖ್ಯ ಅತಿಥಿ ಯಾಗಿ ಸ್ಥಳೀಯ ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ಚರ್ಚ್ ಉದ್ಯಾವರದ ಧರ್ಮಗುರು ರೇ.ಫಾ.ಅನಿಲ್ ಡಿಸೋಜ, ಬ್ರಹ್ಮಾವರ ಸೈಂಟ್ ಮೇರಿಸ್ ಕ್ಯಾಥೆಡ್ರಲ್ ಧರ್ಮಗುರು ಫಾ.ಲಾರೆನ್ಸ್ ಡೆವಿಡ್ ಕ್ರಾಸ್ತ, ಸೀಮಾ ಎಸ್.ಹಳದಿಪುರ, ಮಿಲಾಗ್ರೀಸ್ ಕಲ್ಯಾಣಪುರ ಕಾಲೇಜಿನ ನಿವೃತ್ತ ಪ್ರಾಂಶುಪಾಲ ನೇರಿ ಕರ್ನೆಲಿಯೊ ಮಾತನಾಡಿದರು.

ಸಾಮಾಜಿಕ ಕಾರ್ಯಕರ್ತ ಸ್ಟೀವನ್ ಕುಲಾಸೊ, ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಲೆಕ್ಕ ವ್ಯವಸ್ಥಾಪಕ ಕುಮಾರ್ ಎಚ್.ಎನ್., ಕಿರಿಯ ಸಹಾಯಕ ದೀಕ್ಷಿತ್ ನಾಯ್ಕ್, ಪರಿಚಾರಕ ವಿವಿಯನ್ ಮರ್ವಿನ್ ನೊರೊನ್ಹಾ ಉಪಸ್ಥಿತರಿದ್ದರು. ಸಂತ ವಿನ್ಸೆಂಟ್ ಪಲ್ಲೊಟ್ಟಿ ಕಾನ್ವೆಂಟಿನ ಸುಪಿರಿಯರ್ ಸಿ.ಲೀನಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News