×
Ad

ಕಾರ್ಕಳ ಟೈಗರ್ಸ್ ನಿಂದ ಪೌಷ್ಟಿಕ ಆಹಾರ ವಿತರಣೆ ಕಾರ್ಯಕ್ರಮ

Update: 2024-10-15 12:00 IST

ಕಾರ್ಕಳ: ಕಾರ್ಕಳ ಟೈಗರ್ಸ್ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗದ ವತಿಯಿಂದ ತಾಲೂಕಿನ ಆಯ್ದ 11 ಕ್ಷಯ ರೋಗಿಗಳಿಗೆ ನಿಕ್ಷಯ್ ಮಿತ್ರ ಯೋಜನೆಯ ಮೂಲಕ ಪೌಷ್ಟಿಕ ಆಹಾರದ ಕಿಟ್ ಗಳನ್ನು ವಿತರಿಸಲಾಯಿತು.

ಪ್ರಾಸ್ತಾವಿಕವಾಗಿ ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ ಡಾ.ಸಂದೀಪ್ ಕುಡ್, ಕ್ಷಯಮುಕ್ತ ಗ್ರಾಮ ಪಂಚಾಯತ್ ಮಾಡಲು ಪೌಷ್ಟಿಕ ಆಹಾರದ ಕಿಟ್ ವಿತರಣೆ ಕೂಡ ಪೂರಕವಾಗಲಿದೆ. ಈ ನಿಟ್ಟಿನಲ್ಲಿ ಕಾರ್ಕಳ ಟೈಗರ್ಸ್ ಕಾರ್ಯ ಶ್ಲಾಘನೀಯ ಎಂದರು.

ಹಿರಿಯ ಚಿಕಿತ್ಸ ಮೇಲ್ವಿಚಾರಕ ಶಿವಕುಮಾರ್ ಮಾತನಾಡಿ, ಪ್ರಧಾನ ಮಂತ್ರಿ ಕ್ಷಯಮುಕ್ತ ಭಾರತ ಅಭಿಯಾನದ ಮಹತ್ವ ಹಾಗೂ ಕಾರ್ಕಳ ತಾಲೂಕಿನಕ್ಷಯರೋಗದ ಸ್ಥಿತಿ ಗತಿಗಳ ಕುರಿತು ಮಾಹಿತಿ ನೀಡಿದರು.

ಕಾರ್ಕಳ ಟೈಗರ್ಸ್ ನ ಬೋಳ ಪ್ರಶಾಂತ್ ಕಾಮತ್ ಮಾತನಾಡಿದರು.

ರಮಿತ ಶೈಲೇಂದ್ರ ಕಾರ್ಯಕ್ರಮ ನಿರೂಪಿಸಿದರು, ಪ್ರಕಾಶ್ ರಾವ್ ವಂದಿಸಿದರು, ಟೈಗರ್ಸ್ ತಂಡದ ಶೃಂಗಾರ್ ಪ್ರದೀಪ್, ರವಿ ಶೆಟ್ಟಿ, ಶ್ರೀನಾಥ್, ಗ್ರಾಪಂ ಸದಸ್ಯರಾದ ಪ್ರವೀಣ್ ಹಾಗೂ ಅರುಣ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News