×
Ad

ಸ್ನೇಹಿತನ ಕೊಲೆ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ

Update: 2024-10-23 20:55 IST

ಉಡುಪಿ, ಅ.23: ನಗರದ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿ ಹಣದ ವಿಚಾರದಲ್ಲಿ ಸ್ನೇಹಿತನನ್ನು ಕೊಲೆ ಮಾಡಿರುವ ಪ್ರಕರಣದ ಆರೋಪಿ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ನಿವಾಸಿ ದಿನೇಶ್ ಅಲಿಯಾಸ್ ವೀರಣ್ಣನನ್ನು ಉಡುಪಿ ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಆತನಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಅ.22ರಂದು ಹಣದ ವಿಚಾರವಾಗಿ ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ (38)ಯನ್ನು ವೀರಣ್ಣ ಕತ್ತು ಕೊಯ್ದು ಕೊಲೆ ಮಾಡಿದ್ದನು. ಬಳಿಕ ಸ್ವತಃ ತಾನೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಉಡುಪಿ ನಗರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News