×
Ad

ಗ್ರಾಮ ಆಡಳಿತ ಅಧಿಕಾರಿ ಹುದ್ದೆ ಪರೀಕ್ಷೆ: ನಿಷೇಧಾಜ್ಞೆ ಜಾರಿ

Update: 2024-10-24 19:26 IST

ಉಡುಪಿ, ಅ.24: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಅ.26 ರಂದು ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿ ಕಡ್ಡಾಯ ಕನ್ನಡ ಭಾಷೆ ಪರೀಕ್ಷೆ ಹಾಗೂ ಅ.27ರಂದು ಸ್ಪಧಾತ್ಮಕ ಪರೀಕ್ಷೆಯು ಜಿಲ್ಲೆಯಲ್ಲಿ ನಿಗದಿಪಡಿಸಿರುವ ಒಟ್ಟು 15 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ, ಶಾಂತಿಯುತವಾಗಿ ಹಾಗೂ ದೋಷರಹಿತ ವಾಗಿ ನಡೆಯಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತ 200ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಈ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳ 200ಮೀ.ಸುತ್ತ ಇರುವ ಎಲ್ಲಾ ಸೈಬರ್ ಮತ್ತು ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು, ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ನಿಷೇಧಿತ ಪ್ರದೇಶವೆಂದು ಜಾರಿಗೊಳಿಸಿದ ಪರೀಕ್ಷಾ ಕೇಂದ್ರಗಳ ವ್ಯಾಪ್ತಿ ಯಲ್ಲಿ ಗುಂಪು ಸೇರುವುದು ಅಥವಾ ತಿರುಗುವುದನ್ನು, ಅನುಮಾನಾಸ್ಪದ ವ್ಯಕ್ತಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಛೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News