×
Ad

ಉಡುಪಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾಗಿ ಡಾ.ರೋಶನ್‌ ಕುಮಾರ್ ಅಧಿಕಾರ ಸ್ವೀಕಾರ

Update: 2024-10-24 19:46 IST

ಉಡುಪಿ, ಅ.೨೪: ಉಡುಪಿ ಜಿಲ್ಲಾ ಗೃಹರಕ್ಷಕ ದಳದ ಗೌರವ ಸಮಾದೇಷ್ಟರಾಗಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ರೋಶನ್ ಕುಮಾರ್ ಶೆಟ್ಟಿ ಇವರನ್ನು ರಾಜ್ಯ ಸರಕಾರ ನೇಮಿಸಿ ಆದೇಶ ಹೊರಡಿಸಿದೆ.

ತೆಂಕನಿಡಿಯೂರು ಸರಕಾರಿ ಪದವಿ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರೂ ಆಗಿರುವ ಡಾ.ರೋಶನ್‌ ಕುಮಾರ್, ಜಿಲ್ಲಾ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಲ್ಲಿ ಸಹಾಯಕ ನಿರ್ದೇಶಕ ರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ.

ಡಾ.ರೋಶನ್ ಕುಮಾರ್ ಅವರ ಅಧಿಕಾರಾವಧಿ ಮುಂದಿನ ಐದು ವರ್ಷಗಳವರೆಗೆ ಅಥವಾ ಮುಂದಿನ ಸರಕಾರದ ಆದೇಶ ದವರೆಗೆ ಜಾರಿಯಲ್ಲಿ ಇರುತ್ತದೆಎಂದು ಪ್ರಕಟಣೆ ತಿಳಿಸಿದೆ. ಡಾ.ರೋಶನ್‌ಕುಮಾರ್ ಅವರು ಇಂದು ತಮ್ಮ ಅಧಿಕಾರವನ್ನು ವಹಿಸಿಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News