×
Ad

ಮಾನ್ಯತೆ ಹೊಂದಿದ ಪರಿಶಿಷ್ಟ ಜಾತಿ, ಪಂಗಡದ ಪತ್ರಕರ್ತರಿಗೆ ಮೀಡಿಯಾ ಕಿಟ್‌ಗೆ ಅರ್ಜಿ ಆಹ್ವಾನ

Update: 2024-10-28 20:35 IST

ಉಡುಪಿ, ಅ.28: ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ ಮೀಡಿಯಾ ಕಿಟ್ ತರಿಸಲು ಅರ್ಜಿಗಳನ್ನು ಆಹ್ವಾನಿಸಿದೆ.

ಪ.ಜಾತಿ ಮತ್ತು ಪ.ಪಂಗಡದ ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅಥವಾ ಆಯಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಂದ ಅರ್ಜಿ ನಮೂನೆಯನ್ನು ಪಡೆದು, ಇಲಾಖೆಯ ಮಾನ್ಯತಾ ಕಾರ್ಡು, ಜನ್ಮ ದಿನಾಂಕ, ಖಾಯಂ ವಿಳಾಸ, ವಿದ್ಯಾರ್ಹತೆ, ಜಾತಿ(ಉಪಜಾತಿ), ಪತ್ರಿಕಾಲಯದಲ್ಲಿ ಕರ್ತವ್ಯ ನಿರ್ವಹಿ ಸುತ್ತಿರುವ ಸೇವಾನುಭವ, ವೇತನ ವಿವರಗಳನ್ನೊಳಗೊಂಡ ಮಾಹಿತಿಯನ್ನು ಭರ್ತಿ ಮಾಡಿ ಸ್ವ-ವಿಳಾಸವಿರುವ ಲಕೋಟೆಯೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.

ಮಾಧ್ಯಮ ಕಿಟ್ ನೀಡಲು ಪತ್ರಕರ್ತರ ಸೇವಾ ಹಿರಿತನ, ವಯೋಮಿತಿ ಹಾಗೂ ಸೇವಾನುಭವದ ಗರಿಷ್ಠತೆಯನ್ನು ಪರಿಗಣಿಸಲಾಗುವುದು. ಅರ್ಜಿ ಯೊಂದಿಗೆ ಕರ್ತವ್ಯ ನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಯ ವಿವರ, ಪ್ರಸಾರ ಸಂಖ್ಯೆ, ಪತ್ರಿಕೆಯ ಮಾಧ್ಯಮ ಪಟ್ಟಿಯ ವಿವರ, ಜಾತಿ ಪ್ರಮಾಣ ಪತ್ರ, ವಿಳಾಸ ಹಾಗೂ ವಯಸ್ಸನ್ನು ದೃಢೀಕರಿಸುವ ದಾಖಲೆಗಳ ಪ್ರತಿಯನ್ನು ಲಗತ್ತಿಸಿ, ನವೆಂಬರ್ 10 ರ ಸಂಜೆ 5:00 ಗಂಟೆಯೊಳಗೆ ಉಡುಪಿ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಧಿಕಾರಿಗಳಿಗೆ ಸಲ್ಲಿಸಬೇಕು.

ಲಕೋಟೆಯ ಮೇಲ್ಬಾಗದಲ್ಲಿ ಪ.ಜಾ ಹಾಗೂ ಪ.ಪಂ.ಮಾಧ್ಯಮ ಮಾನ್ಯತೆ ಪತ್ರಕರ್ತರಿಗೆ ಮೀಡಿಯಾ ಕಿಟ್‌ಗಾಗಿ ಅರ್ಜಿ ಎಂದು ನಮೂದಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ ಉಡುಪಿ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News