ಕಾರು ಢಿಕ್ಕಿ: ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು
Update: 2024-10-28 21:34 IST
ಬೈಂದೂರು, ಅ.28: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಅ.27ರಂದು ಸಂಜೆ ವೇಳೆ ನಾವುಂದ ಗ್ರಾಮದ ನಂಬಿಯಾರ್ ಕ್ಲಿನಿಕ್ ಬಳಿ ರಾ.ಹೆ.66ರಲ್ಲಿ ನಡೆದಿದೆ.
ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಕಾರು, ರಸ್ತೆ ದಾಟುತ್ತಿದ್ದ ಭದ್ರಾ ಎಂಬವರಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು, ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಮೆಯಲ್ಲಿ ಪ್ರಕರಣ ದಾಖಲಾಗಿದೆ.