ಮಗುವಿಗೆ ಜನ್ಮ ನೀಡಿ ಬಾಣಂತಿ ಮೃತ್ಯು
ಬೈಂದೂರು, ಅ.28: ಹೆರಿಗೆ ಸಂದರ್ಭ ಆರೋಗ್ಯದಲ್ಲಿ ಉಂಟಾದ ಏರುಪೇರಿನಿಂದ ಬಾಣಂತಿ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಕಾಲ್ತೋಡು ಗ್ರಾಮದ ಮೂರೂರು ನಿವಾಸಿ ವೆಂಕಟೇಶ್ ಎಂಬವರ ಪತ್ನಿ ಮೂಕಾಂಬಿಕಾ(33) ಎಂದು ಗುರುತಿಸಲಾಗಿದೆ. 7 ತಿಂಗಳ ಗರ್ಭಿಣಿಯಾಗಿದ್ದ ಮೂಕಾಂಬಿಕಾಗೆ ಅ.12ರಂದು ರಾತ್ರಿ ಹೊಟ್ಟೆ ನೋವು ಕಾಣಿಸಿಕೊಂಡಿದ್ದು ಅ.13ರಂದು ಆಕೆಯನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.
ಅ.14ರಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಲೆಡಿಗೋಷನ್ ಆಸ್ಪತ್ರೆಗೆ ದಾಖಲಿಸಿದ್ದು ವೈದ್ಯರು ರಕ್ತ ನೀಡುವಾಗ ಅವರ ಆರೋಗ್ಯ ಏರುಪೇರಾಗಿತ್ತು. ಬಳಿಕ ಶಸ್ತ್ರ ಚಿಕಿತ್ಸೆ ಮೂಲಕ ಮೂಕಾಂಬಿಕಾಗೆ ಹೆರಿಗೆ ಮಾಡಿದ್ದು ಗಂಡು ಮಗುವಿಗೆ ಜನ್ಮ ನೀಡಿದ್ದರು. ತದನಂತರ ಹೆಚ್ಚಿನ ಚಿಕಿತ್ಸೆಗಾಗಿ ಅ.22ರಂದು ಮಂಗಳೂರು ವೆನ್ಲಕ್ ಆಸ್ಪತ್ರೆಗೆ ದಾಖಲಿಸಿದ್ದು ಅ.24ರಂದು ಶಸ್ತ್ರ ಚಿಕಿತ್ಸೆಗೆ ಒಳಗಾದ ಅವರು, ಅ.26ರಂದು ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.