ಕುಷ್ಠರೋಗ ಪ್ರಕರಣ ಪತ್ತೆಗೆ ಅಭಿಯಾನ
Update: 2024-10-31 21:23 IST
ಉಡುಪಿ, ಅ.31: ಜಿಲ್ಲಾ ಆರೋಗ್ಯ ಇಲಾಖೆಯ ವತಿಯಿಂದ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನವು ನವೆಂಬರ್ 4ರಿಂದ 21ರವರೆಗೆ ಜಿಲ್ಲೆಯ ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲಿ ನಡೆಯಲಿದೆ.
ಸಾರ್ವಜನಿಕರು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸರಕಾರಿ ಆಸ್ಪತ್ರೆ ಹಾಗೂ ಆರೋಗ್ಯ ಸಹಾಯಕರು ಅಥವಾ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸ ಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.