×
Ad

ಉಡುಪಿ ತಾಲೂಕು ಕೃಷಿಕ ಸಮಾಜದ ಚುನಾವಣೆ

Update: 2024-11-26 20:10 IST

ಉಡುಪಿ: ಕರ್ನಾಟಕ ಪ್ರದೇಶ ಕೃಷಿಕ ಸಮಾಜದ 5 ವರ್ಷಗಳ ಅವಧಿಗೆ (2025-26ರಿಂದ 2029-30ರವರೆಗೆ), ಉಡುಪಿ ತಾಲೂಕು ಮಟ್ಟದ ಕೃಷಿಕ ಸಮಾಜದ ಚುನಾವಣೆಯನ್ನು ಡಿಸೆಂಬರ್ 15ರಂದು ಉಡುಪಿಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಬೆಳಗ್ಗೆ 8ರಿಂದ ಅಪರಾಹ್ನ 3:00ಗಂಟೆಯವರೆಗೆ ನಿಗದಿಪಡಿಸಲಾಗಿದೆ.

ಈ ಚುನಾವಣೆಗೆ ನಾಮಪತ್ರ ಸಲ್ಲಿಸುವ ಉಮೇದುದಾರರಿಗೆ ನವೆಂಬರ್ 30ರಿಂದ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಯಲ್ಲಿ ನಾಮಪತ್ರವನ್ನು ವಿತರಿಸಲಾಗುವುದು. ಆಕಾಂಕ್ಷಿಗಳು ಚುನಾವಣಾಧಿಕಾರಿಗಳಿಗೆ ಅರ್ಜಿ ಮೂಲಕ 250 ರೂ.ಗಳನ್ನು ಠೇವಣಿಯಾಗಿ ಪಾವತಿಸಿದ ಮೂಲ ರಶೀದಿ ಹಾಗೂ ಸಂಬಂಧಿಸಿದ ತಹಶೀಲ್ದಾರರಿಂದ ದೃಢೀಕೃತ ಪಹಣಿ ಪ್ರತಿಯೊಂದಿಗೆ ನಾಮಪತ್ರ ಸಲ್ಲಿಸಲು ಡಿಸೆಂಬರ್ 6 ಕೊನೆಯ ದಿನವಾಗಿದೆ ಎಂದು ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಹಾಗೂ ಉಡುಪಿ ತಾಲೂಕು ಕೃಷಿಕ ಸಮಾಜದ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News