×
Ad

ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ

Update: 2024-11-28 19:27 IST

ಉಡುಪಿ, ನ.28: ಹೂಡೆಯ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ವಾರ್ಷಿಕ ಕ್ರೀಡಾಕೂಟ ಗುರುವಾರ ನಡೆಯಿತು.

ಕ್ರೀಡಾಕೂಟವನ್ನು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ ಇದರ ರಾಷ್ಟ್ರೀಯ ಅಧ್ಯಕ್ಷ ರಮೀಸ್ ಇ.ಕೆ. ಉದ್ಘಾಟಿಸಿ, ಶುಭ ಹಾರೈಸಿದರು. ನಂತರ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಪ್ರತಿಜ್ಞೆಯನ್ನು ಬೋಧಿಸಲಾಯಿತು. ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ವಿಜೇತರಾದ ಶಾಲೆಯ ಕ್ರೀಡಾಗಳಿಗೆ ಅತಿಥಿಗಳು ಬಹುಮಾನವನ್ನು ವಿತರಿಸಿದರು.

ವೇದಿಕೆಯಲ್ಲಿ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಇದ್ರೀಸ್ ಹೂಡೆ, ಎಸ್‌ಐಓ ರಾಜ್ಯ ಕಾರ್ಯದರ್ಶಿ ನಾಸೀರ್ ಹೂಡೆ, ಟ್ರಸ್ಟಿಗಳಾದ ಉಮ್ಮರ್ ಉಸ್ತಾದ್, ಹುಸೈನ್ ಮಾಸ್ತರ್, ಆಡಳಿತಾಧಿಕಾರಿ ಅಸ್ಲಮ್ ಹೈಕಾಡಿ, ಶಾಲೆಯ ಮುಖ್ಯೋಪಾಧ್ಯಾಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯಿನಿ ಸಾದತ್ ಸ್ವಾಗತಿಸಿದರು. ಶಿಕ್ಷಕಿ ಝಪೀಶಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News