×
Ad

ನಕ್ಸಲ್ ಎನ್‌ಕೌಂಟರ್| ಅಗತ್ಯವಿದ್ದರೆ ನ್ಯಾಯಾಂಗ ತನಿಖೆಗೆ ಸಿಎಂ ಬಳಿ ಚರ್ಚೆ: ಉಡುಪಿಯಲ್ಲಿ ಉಸ್ತುವಾರಿ ಸಚಿವೆ ಹೇಳಿಕೆ

Update: 2024-11-30 21:20 IST

ಉಡುಪಿ: ಹೆಬ್ರಿ ಸಮೀಪದ ಪೀತಬೈಲಿನಲ್ಲಿ ನಡೆದ ನಕ್ಸಲ್ ವಿಕ್ರಂ ಗೌಡ ಎನ್ಕೌಂಟರ್ ನಕಲಿ ಅಲ್ಲ. ಕಾನೂನು ಪ್ರಕಾರ ಕಾನೂನು ಚೌಕಟ್ಟಿನಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಪೊಲೀಸ್ ಹಾಗೂ ಎಎನ್‌ಎಫ್ ಕ್ರಮವನ್ನು ಸಮರ್ಥಿಸಿ ಕೊಂಡಿದ್ದಾರೆ.

ಬಹುಕಾಲದ ನಿರೀಕ್ಷೆಯ ಬಳಿಕ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಭಾಗವಹಿ ಸಲು ಜಿಲ್ಲಾ ಉಸ್ತುವಾರಿ ಸಚಿವೆಯಾಗಿ ಉಡುಪಿಗೆ ಆಗಮಿಸಿರುವ ಹೆಬ್ಬಾಳ್ಕರ್, ಇಂದು ಬೆಳಗ್ಗೆ ಬನ್ನಂಜೆಯಲ್ಲಿರುವ ತನ್ನ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತಿದ್ದರು.

ವಿಕ್ರಂಗೌಡ ಎನ್‌ಕೌಂಟರ್ ಬಗ್ಗೆ ನ್ಯಾಯಾಂಗ ತನಿಖೆಗೆ ಒತ್ತಾಯ ಕೇಳಿ ಬರುತ್ತಿರುವ ಬಗ್ಗೆ ಅವರನ್ನು ಪ್ರಶ್ನಿಸಿದಾಗ, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವುದು ಸರಕಾರದ ನಿರ್ಧಾರ. ಈ ಬಗ್ಗೆ ಅಗತ್ಯವಿದ್ದರೆ ಮುಖ್ಯಮಂತ್ರಿ ಹಾಗೂ ಗೃಹಸಚಿವರೊಂದಿಗೆ ಚರ್ಚಿಸುವುದಾಗಿ ಅವರು ಹೇಳಿದರು.

ನಕ್ಸಲೇಟ್‌ಗಳನ್ನು ಕಟ್ಟಿ ಹಾಕಬೇಕು ಎಂಬುದು ಸರಕಾರದ ನಿರ್ಧಾರ. ಕೂಂಬಿಂಗ್ ಮಾಡುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ವಿಕ್ರಂ ಗೌಡ ಬಳಿ ಕೂಡ ಶಸ್ತ್ರಾಸ್ತ್ರಗಳು ಇತ್ತು. ವಿಕ್ರಂ ಗೌಡ ಸಹ ಒಂದು ಬಾರಿ ಫೈರಿಂಗ್ ಮಾಡಿದ್ದಾರೆ. ಪ್ರತಿ ದಾಳಿ ಮಾಡದಿದ್ದರೆ ಪೊಲೀಸರ ಜೀವ ಹಾನಿ ಆಗುತ್ತಿತ್ತು ಎಂದರು.

ನಕ್ಸಲಿಸಂನ್ನು ಬೇರು ಸಮೇತ ಕಿತ್ತು ಹಾಕಬೇಕೆಂಬುದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಿಲುವು. ಪರ ವಿರೋಧ ಚರ್ಚೆ ಎಲ್ಲಾ ಸಂದರ್ಭದಲ್ಲಿ ಇರುತ್ತ. ಸರ್ಕಾರ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿದೆ. ಸಂಶಯ ಇದ್ದವರಿಗೆ ಮತ್ತೆ ಸ್ಪಷ್ಟನೆ ಕೊಡಲು ನಾವು ತಯಾರಿದ್ದೇವೆ ಎಂದು ಸಚಿವರು ಹೇಳಿದರು.

ಕಾಂಗ್ರೆಸ್‌ನಲ್ಲಿ ಭಿನ್ನಮತ ಇಲ್ಲ: ಹಾಸನದಲ್ಲಿ ಆಯೋಜಿಸಲಿರುವ ಕಾಂಗ್ರೆಸ್‌ನ ಸಮಾವೇಶಕ್ಕೆ ಭಿನ್ನಮತ ಕೇಳಿಬರುತ್ತಿರುವ ಕುರಿತು ಪ್ರಶ್ನಿಸಿದಾಗ, ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ. ಭಿನ್ನಮತ ಇರೋದು ಬಿಜೆಪಿಯಲ್ಲಿ ಮಾತ್ರ. ಬಿಜೆಪಿ ಭಿನ್ನಮತದ ಬಗ್ಗೆ ಮಾಧ್ಯಮಗಳೇ ದಿನಾ ತೋರಿಸುತ್ತಿವೆ. ನಮ್ಮಲ್ಲಿ ಭಿನ್ನಮತ ಇಲ್ಲ ಅನ್ನೋದಕ್ಕೆ ಉಪ ಚುನಾವಣೆಯ ಫಲಿತಾಂಶವೇ ಉತ್ತರ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಅನುದಾನ ಕಡಿತ ಇಲ್ಲ: ವಿಕಲಾಂಗ ಚೇತನ ಹಾಗೂ ಹಿರಿಯ ನಾಗರೀಕ ಇಲಾಖೆಯ ಅನುದಾನವನ್ನು ಕಡಿತ ಮಾಡಲಾ ಗಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಮ್ಮ ಇಲಾಖೆ 32 ಸಾವಿರ ಕೋಟಿಗಿಂತ ಹೆಚ್ಚಿನ ಗಾತ್ರದ ಬಜೆಟ್ ಹೊಂದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಾಂಗ ಚೇತನ ಯಾವುದೇ ಅನುದಾನವನ್ನು ನಾವು ಕಡಿತ ಮಾಡುವು ದಿಲ್ಲ . ಇಲಾಖೆಗೆ 8000 ಅರ್ಜಿಗಳು ಬಂದಿವೆ ಎಂಬುದು ತಪ್ಪು. 2,750ರ,್ಟ ಅರ್ಜಿಗಳು ಮಾತ್ರ ಬಂದಿದ್ದವು ಎಂದರು.

ಸಪ್ಲಿಮೆಂಟರಿ ಬಜೆಟ್‌ನಲ್ಲಿ ಪ್ರಸ್ತಾವನೆ ಕಳುಹಿಸಿದ್ದೇವೆ. ಕ್ಲಿಯರ್ ಆಗುತ್ತೆ. ಈಗಾಗಲೇ 10 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. 2700 ಅರ್ಜಿಗಳಿಗೂ ಸಹಾಯ ಮಾಡುತ್ತೇವೆ. ಅನುದಾನ ಕಡಿತ ಮಾಡಿಲ್ಲ. ಮಾಡಲು ಬಿಡುವುದೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ಮಾಧ್ಯಮಗಳಲ್ಲಿ ಮಾತ್ರ ಸಂಪುಟ ವಿಸ್ತರಣೆ: ಸಚಿವ ಸಂಪುಟ ವಿಸ್ತರಣೆಯ ಚರ್ಚೆ ಕಾಂಗ್ರೆಸ್‌ನಲ್ಲಿ ನಡೆದಿಲ್ಲ. ಮಾಧ್ಯಮ ಗಳಲ್ಲಿ ಮಾತ್ರ ಈ ಬಗ್ಗೆ ಚರ್ಚೆ ನಡೆದಿದೆ. ಸಂಪುಟ ವಿಸ್ತರಣೆ ನಿಜಾನಾ ಸುಳ್ಳ ಎಂಬುದನ್ನು ನೀವೇ (ಮಾಧ್ಯಮದವರು) ಸ್ಪಷ್ಟಪಡಿಸಬೇಕು. ಯಾರನ್ನೋ ತೆಗೀತೀರಾ? ಯಾರನ್ನೋ ಕೂರಿಸ್ತೀರಾ? ಹೊಸದಾಗಿ ಪ್ರಮಾಣವಚನ ಎಂದು ಹೇಳು ತ್ತೀರಾ. ಈ ಚರ್ಚೆಗೆ ಮಾಧ್ಯಮಗಳೇ ಸ್ಪಷ್ಟನೆಯನ್ನು ಕೊಡಬೇಕು. ವಿರೋಧ ಪಕ್ಷದ ಒಳಗಿನ ಗಲಾಟೆ ನಮಗೆ ಅನುಕೂಲ ವಾಗುತ್ತದೆ ಎಂದರು.

ಕಳಪೆ ಆಹಾರ ಪೂರೈಸಿದರೆ ಕ್ರಮ: ರಾಜ್ಯದಲ್ಲಿ ಅಂಗನವಾಡಿಗೆ 50 ವರ್ಷದ ಇತಿಹಾಸವಿದೆ. 70 ಸಾವಿರ ಅಂಗನ ವಾಡಿಯಲ್ಲಿ 35 ಲಕ್ಷ ಮಕ್ಕಳ ಪಾಲನೆ ಮಾಡಲಾಗುತ್ತದೆ. ಅಂಗನವಾಡಿಗಳಲ್ಲಿ ಕಳಪೆ ಅಕ್ಕಿ ವಿತರಣೆ, ಆಹಾರ ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದರು.

ಕೇಂದ್ರ ಸರಕಾರ ಪೂರೈಕೆ ಮಾಡಿದ ಅಕ್ಕಿ, ಗೋಧಿಯನ್ನು ರಾಜ್ಯದ ಅಂಗನವಾಡಿಗಳಿಗೆ ನೀಡುತ್ತೇವೆ. ಕಳಪೆ ಅಕ್ಕಿ, ಕಳಪೆ ಗೋಧಿ ಎಂದು ಹೇಳಲು ಸಾದ್ಯವಿಲ್ಲ. ಭಾರತ ಆಹಾರ ನಿಗಮದಿಂದ ಅವು ಪೂರೈಕೆಯಾಗುತ್ತಿವೆ. ಕಳಪೆ ಗುಣಮಟ್ಟ ಅಕ್ಕಿ ಪೂರೈಕೆಯಾಗಿದ್ದರೆ ಅಕ್ಕಿಯನ್ನು ಬದಲಿಸುತ್ತೇವೆ. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News