×
Ad

ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

Update: 2024-12-30 22:28 IST

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರಿಗೆ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಸ್ಟೇಟ್ ಹಾಸ್ಟೆಲ್ ಪೊರ್ಟಲ್ ತಂತ್ರಾಂಶದ ಮೂಲಕ ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸಿನ, ವಿದ್ಯಾರ್ಥಿಗಳಿಗೆ ವೆಬ್‌ಸೈಟ್ - https://shp.karnataka.gov.in- ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ 6 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂರ್ಪಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News