×
Ad

ಬಾಣಂತಿಯರ ಸಾವಿನ ಪ್ರಕರಣದ ತನಿಖೆ: ಉಡುಪಿ ಬಿಜೆಪಿ ಮಹಿಳಾ ಮೋರ್ಚಾ ಆಗ್ರಹ

Update: 2025-01-02 20:27 IST

ಉಡುಪಿ: ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಆಗುತ್ತಿರುವ ಬಾಣಂತಿ ಯರ ಸಾವಿನ ನೈಜ ಕಾರಣಗಳನ್ನು ತಿಳಿಯಲು ಹೈಕೋರ್ಟ್ ನ್ಯಾಯ ಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್ ಆಗ್ರಹಿಸಿದ್ದಾರೆ.

ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಣಂತಿಯರ ಸಾವನ್ನು ತಡೆಯಲು ವಿಫಲರಾ ಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಸರಕಾರವು ಆತ್ಮಹತ್ಯೆ ಹಾಗೂ ಹತ್ಯೆ ಭಾಗ್ಯವನ್ನು ಕರ್ನಾಟಕದ ಜನತೆಗೆ ನೀಡಿದೆ. ಗರ್ಭಿಣಿಯರ ಆರೈಕೆಗಾಗಿ ಕೇಂದ್ರ ಸರಕಾರ ಜಾರಿ ಗೊಳಿಸಿರುವ ಜನನಿ ಸುರಕ್ಷಾ ಯೋಜನೆ, ಜನನಿ ಶಿಶು ಸುರಕ್ಷಾ ಕಾರ್ಯಕ್ರಮ ಮೊದಲಾದ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಮೃತಪಟ್ಟ ಬಾಣಂತಿಯ ಕುಟುಂಬಕ್ಕೆ ೨೫ಲಕ್ಷ ರೂ ಪರಿಹಾರ ನೀಡಬೇಕು. ಅನಾಥ ಗೊಂಡಿರುವ ಮಕ್ಕಳ ಭವಿಷ್ಯಕ್ಕಾಗಿ ಸರಕಾರ ಆ ಮಕ್ಕಳನ್ನು ದತ್ತು ಪಡೆಯಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ.ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಕುಂದರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News