×
Ad

ಸಿದ್ಧಾಪುರ: ಕಿಶೋರ ಯಕ್ಷ ಸಂಭ್ರಮ ಸಮಾರೋಪ

Update: 2025-01-02 20:57 IST

ಉಡುಪಿ, ಜ.2: ಬೈಂದೂರು ವಿಧಾನಸಭಾ ಕ್ಷೇತ್ರದ ಸಿದ್ದಾಪುರದಲ್ಲಿ ಜರಗಿದ ನಾಲ್ಕು ಪ್ರೌಢಶಾಲೆಗಳ ಕಿಶೋರ ಯಕ್ಷಗಾನ ಸಂಭ್ರಮದ ಸಮಾರೋಪ ಪ್ರದರ್ಶನ ಸಮಿತಿಯ ಕಾರ್ಯಾಧ್ಯಕ್ಷ ಡಾ. ಜಗದೀಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಜರಗಿತು.

ಈ ಸಂದರ್ಭದಲ್ಲಿ ಕಿಶೋರ ಯಕ್ಷ ಸಂಭ್ರಮದಲ್ಲಿ ಭಾಗವಹಿಸಿದ ಎಲ್ಲಾ ನಾಲ್ಕು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಮುಖ್ಯೋ ಪಾಧ್ಯಾಯರ ಮೂಲಕ ಪ್ರಮಾಣ ಪತ್ರ ವಿತರಿಸಲಾಯಿತು. ಮೂವರು ವಿದ್ಯಾರ್ಥಿಗಳು ಯಕ್ಷಗಾನ ಪ್ರದರ್ಶನದ ಕುರಿತಂತೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಮುಖ್ಯ ಅತಿಥಿಗಳಾಗಿ ದಾನಿಗಳಾದ ಚಂದ್ರ ಕುಲಾಲ್, ಪ್ರವೀಣ್ ಪಟೇಲ್, ಚಂದ್ರಾನಂದ ಶೆಟ್ಟಿ, ಪಂಚಾಯತ್ ಉಪಾಧ್ಯಕ್ಷ ರಾದ ಕೃಷ್ಣ ಪೂಜಾರಿ ಭಾಗವಹಿಸಿದ್ದರು. ಕಾರ್ಯದರ್ಶಿ ಗೋಪಾಲ ಕಾಂಚನ್ ಸ್ವಾಗತಿಸಿ, ಯಕ್ಷಶಿಕ್ಷಣ ಟ್ರಸ್ಟ್‌ನ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರದರ್ಶನ ಸಮಿತಿಗೆ ಕೃತಜ್ಞತೆ ಸಲ್ಲಿಸಿದರು. ಟ್ರಸ್ಟ್‌ನ ಸದಸ್ಯ ನಾರಾಯಣ ಎಂ. ಹೆಗಡೆ ಉಪಸ್ಥಿತರಿ ದ್ದರು. ಬಾಲಕೃಷ್ಣ ಮಂಜ ಕಾರ್ಯಕ್ರಮ ನಿರ್ವಹಿಸಿದರು. ಎಸ್‌ಡಿಎಂಸಿ. ಅಧ್ಯಕ್ಷ ವಿಶ್ವನಾಥ ತುಂಬಿಕಲ್ಯಾಯ ವಂದಿಸಿದರು.

ಬಳಿಕ ಶಂಕರನಾರಾಯಣ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಪ್ರದೀಪ್ ಶೆಟ್ಟಿ ಇವರ ನಿರ್ದೇಶನದಲ್ಲಿ ಕುಶಲವ ಮತ್ತು ಇಂದಿರಾಗಾಂಧಿ ವಸತಿ ಶಾಲೆ ಸಿದ್ದಾಪುರ ಇದರ ವಿದ್ಯಾರ್ಥಿಗಳಿಂದ ನರಸಿಂಹ ತುಂಗಾ ನಿರ್ದೇಶನದಲ್ಲಿ ಮೈಂದದ್ವಿ ವಿದ, ರುಗ್ಮಾವತಿ ಕಲ್ಯಾಣ ಯಕ್ಷಗಾನ ಪ್ರದರ್ಶನ ಗೊಂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News