×
Ad

ಯುವನಿಧಿ: ವಿಶೇಷ ನೋಂದಣಿ ಅಭಿಯಾನ ಆರಂಭ

Update: 2025-01-07 20:00 IST

ಉಡುಪಿ: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಲ್ಲಿ 2022-23 ಹಾಗೂ 2023-24ರಲ್ಲಿ ಉತ್ತೀರ್ಣರಾದ ಪದವಿ, ಸ್ನಾತಕೋತರ ಪದವಿ ಮತ್ತು ಡಿಪ್ಲೋಮಾಗಳ ವಿದ್ಯಾರ್ಥಿಗಳು ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಜನವರಿ 6 ರಿಂದ 20ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಮಣಿಪಾಲ ಜಿಲ್ಲಾಧಿಕಾರಿ ಸಂಕೀರ್ಣದ ಬಿ ಬ್ಲಾಕ್, ರೂ.ನಂ. 201ರ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಅಯೋಜಿಸಲಾಗಿದೆ.

ಜಿಲ್ಲೆಯ ಎಲ್ಲಾ ಪದವಿ ಕಾಲೇಜುಗಳು ಹಾಗೂ ಡಿಪ್ಲೋಮಾ ಕಾಲೇಜುಗಳಲ್ಲಿಯೂ ವಿಶೇಷ ನೋಂದಣಿ ಅಭಿಯಾನವನ್ನು ಆಯೋಜಿಸಲಾ ಗಿದ್ದು, ಆಯಾ ತಾಲೂಕಿನ ಅಭ್ಯರ್ಥಿಗಳು ಇದರ ಉಪಯೋಗವನ್ನು ಪಡೆದುಕೊಳ್ಳಬಹುದು. ಪ್ರತಿ ತಿಂಗಳು ಪದವೀಧರರಿಗೆ 3,000 ರೂ. ಹಾಗೂ ಡಿಪ್ಲೋಮಾ ಪದವಿ ಹೊಂದಿರುವವರಿಗೆ 1,500 ರೂ.ಗಳನ್ನು ನಿರು ದ್ಯೋಗ ಭತ್ಯೆಯ ರೂಪದಲ್ಲಿ ನೀಡಲಾಗುವುದು. ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿನಗಳನ್ನು ಪೊರೈಸಿದ ಅಭ್ಯರ್ಥಿಗಳು ಕೂಡ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಬಹುದು.

ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳು: 2024-25ರಲ್ಲಿ ಪದವಿ/ಡಿಪ್ಲೋಮಾ ಹಾಗೂ ಸ್ನಾತಕೋತ್ತರ ಪದವಿ ಉತ್ತಿರ್ಣರಾದ ವಿದ್ಯಾರ್ಥಿಗಳು ಪದವಿ/ಡಿಪ್ಲೋಮಾ ಮುಗಿಸಿದ ಕನಿಷ್ಠ 6 ತಿಂಗಳ ಒಳಗೆ ಸರಕಾರಿ/ಖಾಸಗಿ ಉದ್ಯೋಗ ಹೊಂದಿಲ್ಲದವರು, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವವರು ಹಾಗೂ ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 6 ವರ್ಷಗಳವರೆಗೆ ಪದವಿ/ಡಿಪ್ಲೋಮಾವರೆಗೆ ಅಧ್ಯಯನ ಮಾಡಿದವರು) ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ಪ್ರತಿ ತಿಂಗಳು ಈ ಪ್ರಯೋಜನ ಪಡೆಯಬೇಕಿದ್ದರೆ, ಪ್ರತಿ ತಿಂಗಳಲ್ಲಿ ತಾನು ನಿರುದ್ಯೋಗಿಯೆಂದು, ವ್ಯಾಸಂಗ ಮುಂದುವರಿ ಸುತ್ತಿಲ್ಲವೆಂದು ಹಾಗೂ ಸ್ವಯಂ ಉದ್ಯೋಗಿಯಲ್ಲವೆಂದು ಸ್ವಯಂ ಘೋಷಣೆ ಮಾಡಬೇಕಾಗು ತ್ತದೆ. ಪ್ರಸಕ್ತ ಪ್ರತೀ ಗ್ರಾಮದಲ್ಲಿ ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳು ಲಭ್ಯವಿದ್ದು, ಅಲ್ಲಿ ಅಭ್ಯರ್ಥಿ ಗಳು ನೋಂದಣಿಯನ್ನು ಮಾಡಿಕೊಳ್ಳಬಹುದು ಹಾಗೂ ಸ್ವಯಂ ಘೋಷಣೆ ಯನ್ನು ಪ್ರತೀ ತಿಂಗಳ 25ನೇ ತಾರೀಕಿನ ಒಳಗೆ ಸಲ್ಲಿಸಬೇಕು.

ಯುವನಿಧಿಯ ಪ್ರಯೋಜನ ಪಡೆಯುತ್ತಿರುವ ಅಭ್ಯರ್ಥಿಗಳು ಪ್ರತೀ ತಿಂಗಳು ಸ್ವಯಂ ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುವುದಿಲ್ಲ. ಪ್ರತೀ ತಿಂಗಳು ಪ್ರಯೋಜನ ಪಡೆದುಕೊಳ್ಳಲು ಸ್ವಯಂ ಘೋಷಣೆ ಮಾಡಬೇಕಾಗಿರುವ ಕುರಿತು ಎಸ್‌ಎಂಎಸ್ ಸಂದೇಶವನ್ನು ಅಭ್ಯರ್ಥಿಗಳಿಗೆ ರವಾನಿಸಲಾಗುತ್ತದೆ. ಅಭ್ಯರ್ಥಿ ಗಳು ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು.

ವಿದ್ಯಾನಿಧಿ ಯೋಜನೆಯ ಕುರಿತಂತೆ ಹೆಚ್ಚಿನ ಮಾತಿಗಳಿಗಾಗಿ ವೆಬ್‌ಸೈಟ್ -https://sevasindhugs.karnataka.gov.in- ಯುವನಿಧಿ ಯೋಜನೆಯ ಟೋಲ್ ಪ್ರೀ ಸಹಾಯವಾಣಿ ಸಂಖ್ಯೆ: 18005999918 ಅಥವಾ 18005997154 ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಉಡುಪಿ ಮೊ.ನಂ: 9945856670, 8105774936ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News