×
Ad

ಅಪ್ರೆಂಟಿಸ್ ತರಬೇತಿ: ಅರ್ಜಿ ಆಹ್ವಾನ

Update: 2025-01-07 20:04 IST

ಉಡುಪಿ, ಜ.7: ಬೆಂಗಳೂರಿನ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್)ನಲ್ಲಿ 2025ರ ಮಾರ್ಚ್‌ನಿಂದ ಪ್ರಾರಂಭ ವಾಗುವ ಬ್ಯಾಚ್‌ಗಾಗಿ ವಿವಿಧ ಟ್ರೇಡ್‌ಗಳಲ್ಲಿ ಅಪ್ರೆಂಟಿಸ್ ತರಬೇತಿ ಪಡೆಯಲು ಐಟಿಐ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಅಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ 22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ರಜತಾದ್ರಿ, ಮಣಿಪಾಲ, ಉಡುಪಿ ಸಹಾಯವಾಣಿ ಸಂಖ್ಯೆ: 0820-2574869 ಅನ್ನು ಸಂಪರ್ಕಿಸ ಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News