×
Ad

ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವೀಲ್‌ಚೇರ್ ಸೌಲಭ್ಯ: ಅರ್ಜಿ ಆಹ್ವಾನ

Update: 2025-01-17 21:38 IST

ಉಡುಪಿ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಶೇ.75 ಮತ್ತು ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲತೆ ಹೊಂದಿರುವ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಬ್ಯಾಟರಿ ಚಾಲಿತ ವೀಲ್‌ಚೇರ್ ಸೌಲಭ್ಯ ಪಡೆಯಲು ಸೇವಾಸಿಂಧು, ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಸೇವಾಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕದಲ್ಲಿ ಕನಿಷ್ಟ 10 ವರ್ಷಗಳ ಕಾಲ ವಾಸವಾಗಿದ್ದು, ವಾರ್ಷಿಕ ಆದಾಯ 2 ಲಕ್ಷ ರೂ. ಒಳಗಿರುವ, ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ಚಾಲನೆ ಮಾಡಲು ಸಾಮರ್ಥ್ಯ ಹೊಂದಿರದ ಹಾಗೂ ಕನಿಷ್ಟ ಒಂದು ಕೈ, ಒಂದು ಕಣ್ಣು ಸ್ವಾಧೀನ ದಲ್ಲಿದ್ದು ಹಾಗೂ ಬ್ಯಾಟರಿ ಚಾಲಿತ ವೀಲ್ ಚೇರ್ ಚಲಾಯಿಸಲು ಇತರೆ ಎಲ್ಲಾ ರೀತಿಯಲ್ಲಿ ಸದೃಡರಾಗಿರುವ, ಈ ಹಿಂದೆ ಸರಕಾರದಿಂದ ಯಂತ್ರಚಾಲಿತ ದ್ವಿಚಕ್ರವಾಹನವನ್ನು ಪಡೆದಿರದ ವಿಕಲಚೇತನರು ಜನವರಿ 21ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆ ದೂರವಾಣಿ ಸಂಖ್ಯೆ: 0820-2574810, 2574811 ಅಥವಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳಮಹಡಿ, ಸಿಂಡಿಕೇಟ್ ಬ್ಯಾಂಕ್ ಹತ್ತಿರ, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ ಕಛೇರಿಯನ್ನು ಖುದ್ದಾಗಿಯೂ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News