ಬೆಳಗಾವಿ ಸಮಾವೇಶ ಯಶಸ್ವಿಗೊಳಿಸೋಣ: ವಿನಯಕುಮಾರ ಸೊರಕೆ
ಉಡುಪಿ: ಜ.21ರಂದು ಬೆಳಗಾವಿಯಲ್ಲಿ ಗಾಂಧಿ ಭಾರತದ ಅಂಗವಾಗಿ ನಡೆಯುವ ‘ಜೈಬಾಪು ಜೈ ಭೀಮ್ ಜೈ ಸಂವಿಧಾನ’ ಸಮಾವೇಶ ಯಶಸ್ವಿಯಾಗಲು ಎಲ್ಲರೂ ಸಂಘಟಿತರಾಗಿ ಶ್ರಮಿಸುವಂತೆ ಹಾಗೂ ಸಮಾವೇಶಕ್ಕೆ ಪ್ರತೀ ವಿಧಾನಸಭಾ ಕ್ಷೇತ್ರದಿಂದ ಕನಿಷ್ಠ 100 ಮಂದಿ ಪಾಲ್ಗೊಳ್ಳುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು ಹೇಳಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಬೆಳಗಾವಿ ಸಮಾವೇಶದ ಕುರಿತಂತೆ ಕರೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡು ತಿದ್ದರು. ಈ ಐತಿಹಾಸಿಕ ಸಮಾವೇಶದಲ್ಲಿ ಎಲ್ಲಾ ಭಾಗಗಳಿಂದಲೂ ಪ್ರತಿನಿಧಿಗಳು ಪಾಲ್ಗೊಳ್ಳಬೇಕು ಎನ್ನುವುದು ಪಕ್ಷದ ಉದ್ದೇಶ ಎಂದು ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳು ಎಪ್ರಿಲ್ ಅಥವಾ ಮೇ ತಿಂಗಳಲ್ಲಿ ನಡೆಯುವ ಸಾಧ್ಯತೆಗಳು ಇರುವುದರಿಂದ ಪಕ್ಷದ ಬಲವರ್ಧನೆಗೆ ಹೊಸ ರೂಪ ನೀಡಲಾಗುವುದು ಎಂದರಲ್ಲದೇ ಎಲ್ಲರೂ ಈಗಿನಿಂದಲೇ ಸಿದ್ಧತೆ ನಡೆಸಬೇಕು ಎಂದರು.
ಮಾಜಿ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ ಸೊರಕೆ ಮಾತನಾಡಿ ಸರಕಾರದ ಯೋಜನೆ ಗಳನ್ನು ಪರಿಣಾಮಕಾರಿಯಾಗಿ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಮಾಹಿತಿ ನೀಡುವ ಕಾರ್ಯತಂತ್ರ ಅನುಸರಿ ಸುವುದು ಅಗತ್ಯ ಈ ಹಿನ್ನಲೆಯಲ್ಲಿ ಪ್ರತಿ ಗ್ರಾಮಗಳಲ್ಲಿ ಅಂಗನವಾಡಿ ಕಾರ್ಯಕರ್ತರ ಸಹಕಾರದೊಂದಿಗೆ ಗೃಹಲಕ್ಷ್ಮಿ ಯೋಜನೆಗಳ ಫಲಾನುಭವಿ ಗಳ ಸಮಾವೇಶ ಹಮ್ಮಿಕೊಳ್ಳಬೇಕು ಎಂದರು.
ಜ.21ರ ಗಾಂಧಿ ಭಾರತದ ಅಂಗವಾಗಿ ಬೆಳಗಾವಿಯಲ್ಲಿ ನಡೆಯುವ ಸಮಾವೇಶವನ್ನು ಯಶಸ್ವಿಗೊಳಿಸಲು ಜಿಲ್ಲೆಯ ಎಲ್ಲಾ ಮುಖಂಡರು ಮುತುವರ್ಜಿ ವಹಿಸಬೇಕು. ಇದರ ಅಂಗವಾಗಿ ರಾಜ್ಯದಲ್ಲಿ ನೂರು ಗಾಂಧಿ ಭಾರತ ಕಚೇರಿಗಳನ್ನು ನಿರ್ಮಿ ಸಲು ತೀರ್ಮಾನಿಸಲಾಗಿದೆ ಈ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಹಲವಾರು ಬ್ಲಾಕ್‌ಗಳಿಗೆ ಸ್ವಂತ ಕಚೇರಿಯ ನಿರ್ಮಾಣ ಆಗಲಿದೆ ಎಂದರು.
ಇತ್ತೀಚೆಗೆ ಅಗಲಿದ ಪಕ್ಷದ ಮುಖಂಡರಿಗೆ ಸತೀಶ್ ಕೊಡವೂರು ನುಡಿನಮನ ಸಲ್ಲಿಸಿದರು. ಸಂವಿಧಾನ ರಕ್ಷಣಾ ಕಾರ್ಯ ಕ್ರಮಗಳ ಉಸ್ತುವಾರಿ ದೀಪಕ್ ಪೆರ್ಮುದೆ ಮಾತನಾಡಿ ಪ್ರತಿ ಗ್ರಾಮ ಹಾಗೂ ಪಂಚಾಯತ್ ಮಟ್ಟದಲ್ಲಿ ಸಂವಿಧಾನ ರಕ್ಷಣಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಕೆಪಿಸಿಸಿ ಉಪಾಧ್ಯಕ್ಷ ಎಂ.ಎ.ಗಪೂರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಲಾವಣ್ಯ ಬಳ್ಳಾಲ್ ಬೆಳಗಾವಿ ಸಮಾವೇಶದ ಬಗ್ಗೆ ಮಾಹಿತಿ ನೀಡಿದರ್ವು. ಜಿಲ್ಲಾ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಸ್ವಾಗತಿಸಿ, ಸಹಕಾರಿ ಕಾಂಗ್ರೆಸ್ ಅಧ್ಯಕ್ಷ ಅಣ್ಣಯ್ಯ ಸೇರಿಗಾರ್ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ವಕ್ತಾರ ಭಾಸ್ಕರ ರಾವ್ ಕಿದಿಯೂರು ವಂದಿಸಿದರು.
ಸಭೆಯಲ್ಲಿ ಜಿಲ್ಲಾ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಮಲ್ಯಾಡಿ ಶಿವರಾಮ ಶೆಟ್ಟಿ, ರಾಜು ಪೂಜಾರಿ, ದಿನೇಶ್ ಹೆಗ್ಡೆ ಮಳವಳ್ಳಿ, ಪ್ರಸಾದ್‌ರಾಜ್ ಕಾಂಚನ್, ವೆರೋನಿಕ ಕರ್ನೇಲಿಯೋ, ಹಿರಿಯಣ್ಣ, ವಾಸುದೇವ ಯಡಿಯಾಳ್, ಭುಜಂಗ ಶೆಟ್ಟಿ, ಗೀತಾ ವಾಗ್ಳೆ, ದಿನೇಶ್ ಪುತ್ರನ್, ಬಿ.ನರಸಿಂಹ ಮೂರ್ತಿ, ಬ್ಲಾಕ್ ಅಧ್ಯಕ್ಷರಾದ ರಮೇಶ್ ಕಾಂಚನ್, ಮದನ್ ಕುಮಾರ್, ಹರಿಪ್ರಸಾದ್ ಶೆಟ್ಟಿ, ಶುಭೋದ್ ರಾವ್, ಗೋಪಿನಾಥ್ ಭಟ್, ಮುಖಂಡರಾದ ನವೀನ್ ಚಂದ್ರ ಶೆಟ್ಟಿ, ಬಿಪಿನ್ ಚಂದ್ರಪಾಲ್ ನಕ್ರೆ, ಹರೀಶ್ ಕಿಣಿ, ಡಾ. ಸುನಿತಾ ಶೆಟ್ಟಿ, ಜ್ಯೋತಿ ಹೆಬ್ಬಾರ್, ರೋಶಿನಿ ಒಲಿವರಾ, ಮುಂತಾದವರು ಉಪಸ್ಥಿತರಿದ್ದರು.